ಮಂಡ್ಯ:ನಗರದಲ್ಲಿ 3ನೇ ಹಂತದ ಕೊರೊನಾ ಲಸಿಕೆ ವಿತರಣೆಗೆ ಜಿಲ್ಲಾಧಿಕಾರಿ ಅಶ್ವಥಿ ಚಾಲನೆ ನೀಡಿದ್ದಾರೆ. ಆರೋಗ್ಯ ಇಲಾಖೆಯಿಂದ ನಗರದ ಮಿಮ್ಸ್ ಮೆಡಿಕಲ್ ಆಸ್ಪತ್ರೆ ಸೇರಿ ಕೆಲ ಖಾಸಗಿ ಆಸ್ಪತ್ರೆಯಲ್ಲೂ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಿಸಲು ಚಾಲನೆ ನೀಡಲಾಯಿತು.
ಬಳಿಕ ಆಸ್ಪತ್ರೆಯಲ್ಲಿ ಸಾರ್ವಜನಿಕರು ಲಸಿಕೆ ಪಡೆದುಕೊಂಡರು. ಈ ವೇಳೆ ಎಲ್ಲರೂ ಲಸಿಕೆ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಕ್ಕರೆ ನಾಡಲ್ಲೂ 3ನೇ ಹಂತದ ಕೊರೊನಾ ಲಸಿಕೆ ವಿತರಣೆಗೆ ಚಾಲನೆ ಮಂಡ್ಯ ಜಿಲ್ಲೆಯ 9 ಕೇಂದ್ರಗಳಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಲಸಿಕೆ ಪಡೆದ ಹಿರಿಯ ನಾಗರಿಕರು ಲಸಿಕೆ ಸಿಕ್ಕಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ನಾವು ಲಸಿಕೆ ಪಡೆದ ಮೇಲೆ ನಮಗೆ ಯಾವುದೇ ತೊಂದರೆಯಾಗಿಲ್ಲ. ಯಾರು ಕೂಡ ಭಯ ಪಡುವ ಅಗತ್ಯವಿಲ್ಲ. ಎಲ್ಲರೂ ಧೈರ್ಯವಾಗಿ ಕೋವಿಡ್ ಲಸಿಕೆಯನ್ನು ಪಡೆಯಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕ್ಯಾನ್ಸರ್ ಗೆದ್ದ ಗಟ್ಟಿಯಿಂದ ಹೊರ ಬಂತು ಪುಸ್ತಕ