ಮಂಡ್ಯ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮಳವಳ್ಳಿ: ಬೆಳೆ ರಕ್ಷಣೆಗೆ ಹಾಕಲಾಗಿದ್ದ ವಿದ್ಯುತ್ ತಂತಿ ಸ್ಪರ್ಶದಿಂದ ಕಾಡಾನೆ ಸಾವು - Elephant death in Malavalli Mandya
ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು
ಶಿವಮ್ಮ ಎಂಬವರ ಜಮೀನಿನಲ್ಲಿ ಘಟನೆ ನಡೆದಿದ್ದು, ಬೆಳೆ ರಕ್ಷಣೆಗೆ ಹಾಕಲಾಗಿದ್ದ ವಿದ್ಯುತ್ ಬೇಲಿಗೆ ಸಿಲುಕಿಕೊಂಡು ಸುಮಾರು 6 ವರ್ಷದ ಪ್ರಾಯದ ಗಂಡು ಆನೆ ಸಾವಿಗೀಡಾಗಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಜಮೀನು ಮಾಲೀಕರ ಮೇಲೆ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.