ಮಂಡ್ಯ:ಕೊರೊನಾ ನಿಯಮಗಳನ್ನು ಸರಿಯಾಗಿ ಜಾರಿಗೆ ತರುವಲ್ಲಿ ಸರ್ಕಾರ ಎಡವುತ್ತಿದೆ. ಹಬ್ಬ-ಮದುವೆ ಸಮಾರಂಭಗಳು ಚೆನ್ನಾಗಿಯೇ ನಡೆಯುತ್ತಿವೆ ಎಂದು ಮಾಜಿ ಸಚಿವ ಪುಟ್ಟರಾಜು ಸರ್ಕಾರದ ಬಗ್ಗೆ ವ್ಯಂಗ್ಯವಾಡಿದರು.
'ಕೊರೊನಾ ಮುಂಜಾಗೃತಾ ಕ್ರಮಗಳಲ್ಲಿ ಸರ್ಕಾರದ ತಾರತಮ್ಯ ಸಲ್ಲದು' - ಮಂಡ್ಯ ಕೊರೊನಾ ನಿಯಮ
ಕೊರೊನಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಾಗ ಸರ್ಕಾರ ತಾರತಮ್ಯ ಮಾಡಬಾರದು. ರಾಜಕಾರಣಿಗಳಿಗೂ ಜನರಿಗೂ ಒಂದೇ ಕಾನೂನು ಜಾರಿ ಮಾಡಬೇಕು ಎಂದು ಮಾಜಿ ಸಚಿವ ಪುಟ್ಟರಾಜು ಸಲಹೆ ನೀಡಿದರು.
ಮಾಜಿ ಸಚಿವ ಪುಟ್ಟರಾಜು ಸಲಹೆ
ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೀಕ್ಷೆಗೂ ಮೀರಿ ಜನರು ಕಾರ್ಯಕ್ರಮಗಳಲ್ಲಿ ಸೇರುತ್ತಿದ್ದಾರೆ. ಇದು ಹೀಗೆಯೇ ಮುಂದುವರೆದರೆ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ. ಎಲ್ಲರಿಗೂ ಒಂದೇ ಕಾನೂನು ಮಾಡಬೇಕು ಎಂದು ಹೇಳಿದರು.
ಮದುವೆ ಹಾಗೂ ಇತರ ಸಮಾರಂಭಗಳಲ್ಲಿ ಸಾವಿರಾರು ಜನ ಸೇರುತ್ತಿದ್ದಾರೆ. ನಿಯಮ ಮೀರಿದರೆ ರಾಜಕಾರಣಿಗಳು, ಜನರ ಮೇಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.