ಮಂಡ್ಯ: ಸಿಡಿಲು ಬಡಿದು ಓರ್ವ ರೈತ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ಕೆ.ಆರ್.ಪೇಟೆಯಲ್ಲಿ ಸಿಡಿಲು ಬಡಿದು ರೈತ ಸಾವು: ಇಬ್ಬರಿಗೆ ಗಂಭೀರ ಗಾಯ - ಮಂಡ್ಯ ಲೇಟೆಸ್ಟ್ ನ್ಯೂಸ್
ಮೊಮ್ಮಗಳ ಜೊತೆ ಆಟವಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ಸಿಡಿಲು ಬಡಿದು ರೈತ ಸಾವು
ಶಿವಪುರ ಪಾಪಣ್ಣ(60) ಮೃತ ರೈತ. ಇವರ ಅಳಿಯ ನಾಗರಾಜು(40) ಮತ್ತು ಮೊಮ್ಮಗಳು ಶ್ರೇಯಾ (7) ಗಾಯಗೊಂಡಿರುವರು. ಪಾಪಣ್ಣ ತಮ್ಮ ಅಳಿಯನ ಮನೆಗೆ ಬಂದಿದ್ದರು. ಊಟ ಮಾಡಿ ಮೊಮ್ಮಗಳ ಜೊತೆ ಆಟವಾಡುತ್ತಿದ್ದಾಗ ಸಿಡಿಲು ಬಡಿದಿದ್ದು, ಪಾಪಣ್ಣ ಸಾವನ್ನಪ್ಪಿದ್ದಾರೆ.
ಇನ್ನು ಗಾಯಾಳುಗಳನ್ನು ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.