ಮಂಡ್ಯ:ಕಾವೇರಿ ನೀರಿಗಾಗಿ ಮಂಡ್ಯದ ರೈತರು ಸರಣಿ ಹೋರಾಟ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇಂದು ನಗರದ ಹೊರ ವಲಯದಲ್ಲಿ ಅರೆಬೆತ್ತಲೆ ಪ್ರತಿಭಟನೆ ಹಾಗೂ ಹೆದ್ದಾರಿ ಬಂದ್ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದರು.
ನೀರಿಗಾಗಿ ಭುಗಿಲೆದ್ದ ಮಂಡ್ಯ ರೈತರ ಹೋರಾಟ: ಹೆದ್ದಾರಿಯಲ್ಲೇ ಪ್ರತಿಭಟನೆ - ರೈತರು
ಮಂಡ್ಯದ ವಿ.ಸಿ ಫಾರಂ ಗೇಟ್ ಬಳಿ ರೈತ ಸಂಘದ ಕಾರ್ಯಕರ್ತರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು. ನಾಲೆಗಳಿಗೆ ಕಾವೇರಿ ನೀರು ಹರಿಸಬೇಕೆಂದು ಆಗ್ರಹಿಸಿದರು. ಸುಮಾರು ಅರ್ಧ ಗಂಟೆ ಹೆದ್ದಾರಿಯಲ್ಲೇ ಪ್ರತಿಭಟನೆ ನಡೆಸಿದರು.
ಕಾವೇರಿ ನೀರಿಗಾಗಿ ರೈತರ ಹೋರಾಟ
ನಗರದ ವಿ.ಸಿ ಫಾರಂ ಗೇಟ್ ಬಳಿ ರೈತ ಸಂಘದ ಕಾರ್ಯಕರ್ತರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಜಿಲ್ಲೆಯ ನಾಲೆಗಳಿಗೆ ಕಾವೇರಿ ನೀರು ಹರಿಸುವಂತೆ ಆಗ್ರಹಿಸಿದರು. ಸುಮಾರು ಅರ್ಧ ಗಂಟೆ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು.
ಕೂಡಲೇ ಕಾವೇರಿ ನೀರು ಬಿಡುಗಡೆ ಮಾಡಿ, ಬೆಳೆ ರಕ್ಷಿಸಬೇಕು. ರಾಜ್ಯ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಹೆದ್ದಾರಿ ತಡೆಯಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.