ಮಂಡ್ಯ:ಕೇಂದ್ರ ಸರ್ಕಾರದ ಆರ್ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ,ಮಂಡ್ಯ ಹಾಲು ಉತ್ಪಾದಕರ ಸಹಕಾರ ಸಂಘ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಜನರು ರಸ್ತೆಗಳಿದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಆರ್ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ರೈತರ ಪ್ರತಿಭಟನೆ - ಮಂಡ್ಯದಲ್ಲಿ ರೈತರ ಪ್ರತಿಭಟನೆ
ಕೇಂದ್ರ ಸರ್ಕಾರದ ಆರ್ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ,ಮಂಡ್ಯ ಹಾಲು ಉತ್ಪಾದಕರ ಸಹಕಾರ ಸಂಘ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಜನರು ರಸ್ತೆಗಳಿದು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಸುಮಾರು 3 ಕಿಲೋ ಮೀಟರ್ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು,ಮೋದಿ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅವೈಜ್ಞಾನಿಕ ಹಾಲಿನ ಆಮದು ಒಪ್ಪಂದಿಂದ ರೈತರಿಗೆ ಸಾಕಷ್ಟು ನಷ್ಟವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಈ ನಿರ್ಧಾರವನ್ನ ಕೈಬಿಡುವಂತೆ ಒತ್ತಾಯಿಸಿದರು. ರೈತರ ಹೋರಾಟಕ್ಕೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ವ್ಯಕ್ತಪಡಿಸಿದರು.
ಇನ್ನು, ಮುಕ್ತ ವ್ಯಾಪಾರ ಒಪ್ಪಂದವನ್ನ ಬಿಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಒಂದು ವೇಳೆ ಕೇಂದ್ರ ಸರ್ಕಾರ ಒಪ್ಪಂದ ಕೈಬಿಡದೇ ಇದ್ದಲ್ಲಿ ಬೃಹತ್ ಹೋರಾಟ ನಡೆಸೋದಾಗಿ ಎಚ್ಚರಿಕೆ ನೀಡಿದರು.