ಮಂಡ್ಯ :ರೈತ ವಿರೋಧಿ ಸರ್ಕಾರದ ನಡೆಗಳ ಖಂಡಿಸಿ ಇವತ್ತು ರೈತರು ಜಿಲ್ಲಾಧಿಕಾರಿಗಳ ಬಳಿ ಪ್ರತಿಭಟನೆ ನಡೆಸಿದರು. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಮತ್ತು ಅಡವಿಟ್ಟಿದ್ದ ರೈತರ ಆಭರಣ ಹರಾಜು ಕೈಬಿಡಬೇಕು, ನಾಲೆಗಳಿಗೆ ನೀರು ಹರಿಸೋದು ಸೇರಿ ಹಲವು ಬೇಡಿಕೆಯೊಂದಿಗೆ ರೈತರು ಪ್ರತಿಭಟಿಸಿದರು.
ಭೂ ಸುಧಾರಣೆ ತಿದ್ದುಪಡೆ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತರ ಪ್ರತಿಭಟನೆ
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ನಾಲೆಗಳಿಗೆ ನೀರು ಬಿಡುಗಡೆ ಮಾಡಬೇಕು, ಬ್ಯಾಂಕ್‌ಗಳ ಮೇಲೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದರು. ಮೈಶುಗರ್ ವಿಚಾರವಾಗಿಯೂ ಒಂದು ಸೂಕ್ತ ನಿರ್ಧಾರಕ್ಕೆ ಬರಬೇಕು, ಕಬ್ಬು ಕಟಾವಿಗೆ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾನಿರತ ರೈತರು ಒತ್ತಾಯ ಮಾಡಿದರು.
ಭೂ ಸುಧಾರಣೆ ತಿದ್ದುಪಡೆ ಕಾಯ್ದೆ ಹಿಂಪಡೆಯುವಂತೆ ಆಗ್ರಹ,
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ಗೆ ರೈತ ಮುಖಂಡರು ಮನವಿ ಸಲ್ಲಿಸಿದರು.