ಮಂಡ್ಯ:ಕೆಆರ್ಎಸ್ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ರಾಸುಗಳೊಂದಿಗೆ ನೀರಾವರಿ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಮದ್ದೂರು ಪಟ್ಟಣದಲ್ಲಿ ನಡೆದಿದೆ.
'ನಾಲೆಗೆ ನೀರು ಬಿಡಿ'; ನೀರಾವರಿ ಕಚೇರಿಗೆ ರಾಸುಗಳನ್ನು ಕಟ್ಟಿ ರೈತರ ಪ್ರತಿಭಟನೆ - ಕೆಆರ್ಎಸ್
ಕೊಪ್ಪ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹೀಗಾಗಿ ಬೆಳೆಗಳು ಒಣಗುತ್ತಿವೆ. ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿರುವ ರೈತರು, ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಜಿಲ್ಲೆಯ ಶಾಸಕರ ವಿರುದ್ಧ ಧಿಕ್ಕಾರ ಕೂಗಿದರು.
ಕಾವೇರಿ ನೀರಾವರಿ ನಿಗಮದ ತಾಲೂಕು ಕಚೇರಿ ಬಳಿ ರಾಸುಗಳನ್ನು ಕಟ್ಟಿ ಹಾಕಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಸುಗಳಿಗೆ ಕುಡಿಯಲು ನೀರಿಲ್ಲ, ಇವುಗಳ ರಕ್ಷಣೆಗೆ ನೀರನ್ನು ಬಿಡಿ ಎಂದು ಒತ್ತಾಯ ಮಾಡುತ್ತಿದ್ದಾರೆ.
ಎಮ್ಮೆ, ದನಗಳನ್ನು ಕಟ್ಟಿ ಹಾಕಿ ರೈತರು ಪ್ರತಿಭಟನೆ ಮಾಡುತ್ತಿದ್ದು, ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪ ಭಾಗದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಬೆಳೆಗಳು ಒಣಗುತ್ತಿವೆ. ಕೂಡಲೇ ನೀರು ಹರಿಸುವಂತೆ ಒತ್ತಾಯ ಮಾಡಿದ ರೈತರು, ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಜಿಲ್ಲೆಯ ಶಾಸಕರ ವಿರುದ್ಧ ಧಿಕ್ಕಾರ ಕೂಗಿದರು.