ಮಂಡ್ಯ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಹಾಗೂ ಎಪಿಎಂಸಿ ಕಾಯ್ದೆಯನ್ನು ವಿರೋಧಿಸಿದ ರೈತರು ಶ್ರೀರಂಗಪಟ್ಟಣ ತಹಶೀಲ್ದಾರರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು, ಕೂಡಲೇ ಈ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಈ ಮೂಲಕ ರೈತರಿಗೆ ಆಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ವಿರೋಧ: ತಹಶೀಲ್ದಾರ್ ಕಚೇರಿಗೆ ಮುತ್ತಿಗೆ - protest by peasants in mandya
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಹಶೀಲ್ದಾರರ ಕಚೇರಿಗೆ ಮುತ್ತಿಗೆ ಹಾಕಿದ ರೈತರು ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಹಾಗೂ ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದರು.
ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ವಿರೋಧ
ಶ್ರೀರಂಗಪಟ್ಟಣ ತಹಶೀಲ್ದಾರ್ ಕಚೇರಿಯ ಮುಖ್ಯ ದ್ವಾರದ ಬಾಗಿಲು ಮುಚ್ಚಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಮನವಿ ಮಾಡಿದರು.