ಮಂಡ್ಯ: ಜಿಲ್ಲೆಯ ಸ್ವಾಭಿಮಾನಕ್ಕಾಗಿ ಸತ್ಯಾಗ್ರಹ ಆರಂಭವಾಗಿದೆ. ಕಾವೇರಿ ಉದ್ಯಾನವನದ ಸಮೀಪ ಡಾ. ರವೀಂದ್ರ ನೇತೃತ್ವದಲ್ಲಿ ಸತ್ಯಾಗ್ರಹ ಆರಂಭವಾಗಿದ್ದು, ಮೂರು ದಿನ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.
ಉಪವಾಸ ಸತ್ಯಾಗ್ರಹಕ್ಕೆ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗಿದೆ. ರೈತ ಸಂಘ, ಮಹಿಳಾ ಸಂಘ, ಪ್ರಗತಿಪರ ಸಂಘಟನೆಗಳು, ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಮುಖಂಡರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ. ಮೂರು ದಿನಗಳ ಕಾಲ ನಡೆಯಲಿರುವ ಈ ಸತ್ಯಾಗ್ರಹಕ್ಕೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಸುಮಾರು 10 ಮಂದಿ ಉಪವಾಸ ಮಾಡುವ ಸಾಧ್ಯತೆ ಇದೆ.