ಕರ್ನಾಟಕ

karnataka

ETV Bharat / state

ಮಳವಳ್ಳಿ ಬಳಿ ಮಹಿಳೆ ಮೇಲೆ ಫೈರಿಂಗ್... ಬೆಚ್ಚಿಬಿದ್ದ ಗ್ರಾಮಸ್ಥರು - ಮಂಡ್ಯ ಜಿಲ್ಲೆ ಮಳವಳ್ಳಿ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ ಗಾಣಾಳು ಹೊಸದೊಡ್ಡಿ ಗ್ರಾಮದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

By

Published : Oct 9, 2019, 12:01 PM IST

ಮಂಡ್ಯ: ಮಹಿಳೆ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮಳವಳ್ಳಿ ತಾಲೂಕಿನ ಗಾಣಾಳು ಹೊಸದೊಡ್ಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಹಿಳೆ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಳವಳ್ಳಿ ತಾಲೂಕಿನ ಗಾಣಾಳು ಹೊಸದೊಡ್ಡಿ ಗ್ರಾಮದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ

ಗಾಣಾಳು ಹೊಸದೊಡ್ಡಿ ಗ್ರಾಮದ ರಾಜಮ್ಮ ಎಂಬ ಮಹಿಳೆ ಮೇಲೆ ಅದೇ ಗ್ರಾಮದ ರವಿ ಎಂಬಾತ ದಾಳಿ ಮಾಡಿದ್ದಾನೆ ಎಂದು ತಿಳಿದುಬಂದಿದೆ.ರಾಜಮ್ಮ ತನ್ನ ಚಿಲ್ಲರೆ ಅಂಗಡಿಯ ವ್ಯಾಪಾರ ಮುಗಿಸಿ ಬಾಗಿಲು ಹಾಕುತ್ತಿದ್ದ ವೇಳೆ ಆರೋಪಿ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ.

ಗುಂಡಿನ ಶಬ್ದಕ್ಕೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ರವಿ ಎಂಬಾತನ ಕೈಗೆ ಗನ್ ಹೇಗೆ ಸಿಕ್ಕಿದೆ ಎಂಬ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಗ್ರಾಮಕ್ಕೆ ಎಸ್ಪಿ ಪರಶುರಾಮ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

ABOUT THE AUTHOR

...view details