ಮಂಡ್ಯ:ಸಕ್ಕರೆ ಜಿಲ್ಲೆಯಲ್ಲೂ ಪ್ರವಾಹದ ಮುನ್ನೆಚ್ಚರಿಕೆಯನ್ನು ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ್ದು, ಯಾವುದೇ ಕ್ಷಣದಲ್ಲಾದರೂ 1 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡುವ ಎಚ್ಚರಿಕೆ ನೀಡಿದ್ದಾರೆ.
ಕಾವೇರಿಯಲ್ಲೂ ಪ್ರವಾಹದ ಭೀತಿ: ನದಿ ಪಾತ್ರದ ಜನರಿಗೆ ಅಧಿಕಾರಿಗಳ ಎಚ್ಚರಿಕೆ
ಸಕ್ಕರೆ ಜಿಲ್ಲೆಯಲ್ಲೂ ಪ್ರವಾಹದ ಮುನ್ನೆಚ್ಚರಿಕೆಯನ್ನು ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ್ದು, ಯಾವುದೇ ಕ್ಷಣದಲ್ಲಾದರೂ 1 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡುವ ಎಚ್ಚರಿಕೆ ನೀಡಿದ್ದಾರೆ.
ಕೆಆರ್ಎಸ್
ಸದ್ಯ ಕೆ.ಆರ್.ಸಾಗರ ನೀರಿನ ಮಟ್ಟ 102.00 ಅಡಿ ಇದ್ದು, ಒಳಹರಿವಿನ ಪ್ರಮಾಣ 73,284 ಕ್ಯೂಸೆಕ್ ಇದೆ. ಹೇಮಾವತಿ, ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಮುಂದೆ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಅಣೆಕಟ್ಟೆಗೆ ಬರುವ ಸಾಧ್ಯತೆ ಇದ್ದು, ನದಿಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.