ಕರ್ನಾಟಕ

karnataka

ETV Bharat / state

ಅರಣ್ಯಾಧಿಕಾರಿಗಳಿಗೆ ನಿಂದನೆ, ಬೆದರಿಕೆ ಆರೋಪ.. ಶಾಸಕ ಸುರೇಶ್ ​​ಗೌಡ ವಿರುದ್ಧ ಎಫ್​ಐಆರ್​ - ಅರಣ್ಯಾಧಿಕಾರಿಗಳಿಗೆ ನಿಂದನೆ ಬೆದರಿಕೆ

ಅರಣ್ಯ ಸಿಬ್ಬಂದಿಯನ್ನ ಅವಾಚ್ಯ ಶಬ್ಧಗಳಿಂದ ಶಾಸಕ ಸುರೇಶ್ ಗೌಡ ನಿಂದಿಸಿದ ಆರೋಪ ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ ನಡೆದಿದ್ದು, ಈಗ ಶಾಸಕರು ಸೇರಿದಂತೆ 10 ಜನರ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ.

Etv Bharatmla-suresh-gowda
ಶಾಸಕ ಸುರೇಶ್​​ಗೌಡ

By

Published : Aug 6, 2022, 7:14 PM IST

ಮಂಡ್ಯ:ಅರಣ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ಆರೋಪ ಹಿನ್ನೆಲೆ ನಾಗಮಂಗಲ ಶಾಸಕ ಸುರೇಶ್​​ ಗೌಡ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ. ಸುರೇಶ್ ​​ಗೌಡ ವಿರುದ್ಧ ನಾಗಮಂಗಲ ಆರ್​​ಎಫ್​ಓ ಸತೀಶ್ ದೂರು ನೀಡಿದ್ದಾರೆ. ಶಾಸಕ ಸುರೇಶ್​ ಗೌಡ ಸೇರಿದಂತೆ 10 ಜನರ ವಿರುದ್ಧ ಜಿಲ್ಲೆಯ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಪಶು ನಿರೋಧಕ ಕಂದಕ ತೆಗೆಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದು, ನಾಗಮಂಗಲದ ಹಾಲತಿ ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹಾಲತಿ ಗ್ರಾಮಸ್ಥರಿಂದ ಅರಣ್ಯ ಸಿಬ್ಬಂದಿ ಕೆಲಸಕ್ಕೆ ಅಡ್ಡಿಪಡಿಸಲಾಗಿದೆ. ಅರಣ್ಯ ಒತ್ತುವರಿದಾರರಿಗೆ ಶಾಸಕರು ಕುಮ್ಮಕ್ಕು ನೀಡಿದ್ದಾರೆಂದು ದೂರು ನೀಡಲಾಗಿದೆ. ಮೊನ್ನೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು.

ಅರಣ್ಯ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ :ಅರಣ್ಯ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ಶಾಸಕ ನಿಂದಿಸಿರುವ ಆರೋಪ ಪ್ರಕರಣ ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಶಾಸಕ ಸುರೇಶ್ ಗೌಡ ಅವರು ಅಧಿಕಾರಿಗಳ ವಿರುದ್ಧ ಅಸಭ್ಯ ಪದ ಬಳಸಿದ್ದಾರೆ ಎನ್ನಲಾಗುತ್ತಿದೆ. ಜಮೀನು ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ರೈತರ ನಡುವೆ ಘರ್ಷಣೆ ಉಂಟಾಗಿದೆ. ಸರ್ವೆ ನಂ 135ರಲ್ಲಿ ಅರಣ್ಯ ಇಲಾಖೆ ನೆಡು ತೋಪು ಬೆಳೆಸಿದೆ. ಅದೇ ಜಮೀನಿಗಾಗಿ ರೈತರು ಬಗರ್ ಹುಕುಂ ಸಾಗುವಳಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ :ಅವಾಚ್ಯ ಶಬ್ಧಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ನಿಂದಿಸಿದ ಶಾಸಕ ಸುರೇಶ್‍ಗೌಡ

ಜಮೀನು ವಶಪಡಿಸಿಕೊಳ್ಳಲು ಬಂದ ಅಧಿಕಾರಿಗಳ ವಿರುದ್ಧ ರೈತರು ಅಸಮಾಧಾನಗೊಂಡಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ರೈತರನ್ನು ಅಧಿಕಾರಿಗಳು ಬೆದರಿಸಿದ್ದಾರೆ. ಅಧಿಕಾರಿಗಳ ವರ್ತನೆಗೆ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗ್ತಿದೆ.

ABOUT THE AUTHOR

...view details