ಕರ್ನಾಟಕ

karnataka

ETV Bharat / state

ಮಂಡ್ಯ: ಕಿಡಿಗೇಡಿಗಳಿಂದ ಭತ್ತದ ಬಣವೆಗೆ ಬೆಂಕಿ - mandya Fire on the paddy grass

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೂಗತಹಳ್ಳಿ ಗ್ರಾಮದ ಶಿವಲಿಂಗಯ್ಯ ಎಂಬುವವರಿಗೆ ಸೇರಿದ 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಭತ್ತದ ಬಣವೆ ಬೆಂಕಿ ಗಾಹುತಿಯಾಗಿದೆ‌.

mandya
ಭತ್ತದ ಹುಲ್ಲಿನಮೆದೆಗೆ ಬೆಂಕಿ

By

Published : Feb 8, 2021, 2:07 PM IST

ಮಂಡ್ಯ: ಮಳವಳ್ಳಿ ತಾಲೂಕಿನ ಬೂಗತಹಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಭತ್ತದ ಬಣವೆಗೆ ಬೆಂಕಿ ಹಾಕಿದ್ದು, ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೂಗತಹಳ್ಳಿ ಗ್ರಾಮದ ಶಿವಲಿಂಗಯ್ಯ ಎಂಬುವವರಿಗೆ ಸೇರಿದ 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಭತ್ತದ ಬಣವೆ ಬೆಂಕಿಗಾಹುತಿಯಾಗಿದೆ‌. ರಾತ್ರಿ ಸಮಯದಲ್ಲಿ ಕಿಡಿಗೇಡಿಗಳು ಬೆಂಕಿ ಹಾಕಿದ್ದು, ತಕ್ಷಣ ಗ್ರಾಮಸ್ಥರು ಅಗ್ನಿ ಶಾಮಕದಳಕ್ಕೆ ಮಾಹಿತಿ ತಿಳಿಸಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಇನ್ನೂ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಗೆ ಶಿವಲಿಂಗಯ್ಯ ದೂರು ನೀಡಿದ್ದು, ಸದ್ಯ ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details