ಮಂಡ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಗೃಹ ಸಚಿವರ ಕಾರು ಚಾಲಕನ ವಿರುದ್ಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ದೂರು ತಾಲೂಕಿನ ನಿಡಘಟ್ಟ ಬಳಿ ತಪಾಸಣೆಗೆ ಕಾರು ನಿಲ್ಲಿಸದ ಹಿನ್ನೆಲೆಯಲ್ಲಿ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ನವೆಂಬರ್ 25 ರಂದು ಎಫ್ ಐ ಆರ್ ದಾಖಲಾಗಿದೆ. ನವೆಂಬರ್ 20 ರಂದು ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳು ತಪಾಸಣೆಗೆ ಕಾರು ತಡೆದರೂ ಕಾರನ್ನು ನಿಲ್ಲಿಸದೇ ಚಾಲಕ ತೆರಳಿದ್ದ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳ ದೂರಿನ ಹಿನ್ನೆಲೆಯಲ್ಲಿ ಕಾರಿ ನಂಬರ್ ಕೆ.ಎ.03, ಜಿ-518ರ ಚಾಲಕ ವಿರುದ್ಧ ಐಪಿಸಿ 188ರ ಅಡಿ ಪ್ರಕರಣ ದಾಖಲಾಗಿದೆ. ಅಂದು ಈ ಕಾರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಹ ತೆರಳುತ್ತಿದ್ದರು ಎನ್ನಲಾಗ್ತಿದೆ.