ಮಂಡ್ಯ :ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಐವರು ನಾಲೆಯಲ್ಲಿ ಈಜಲು ಹೋಗಿ ನೀರು ಪಾಲಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ತಾಲೂಕಿನ ದೊಡ್ಡಕೊತ್ತಗೆರೆ ಗ್ರಾಮದ ಬಳಿ ನಡೆದಿದೆ. ಸದ್ಯ ಮೂವರ ಶವ ಪತ್ತೆಯಾಗಿದ್ದು, ಇನ್ನಿಬ್ಬರ ಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ. ಅನೀಷಾ ಬೇಗಂ(10), ತಸ್ಮಿಯಾ (22), ಮೆಹತಾಬ್ (10) ಶವ ಪತ್ತೆಯಾಗಿದ್ದು, ಅಶ್ರಕ್ (28), ಅಫಿಕಾ (22)ಶವ ಇನ್ನೂ ಪತ್ತೆಯಾಗಿಲ್ಲ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಐವರು ನೀರು ಪಾಲು - ಈಟಿವಿ ಭಾರತ ಕನ್ನಡ
ಬೇಸಿಗೆ ರಜೆ ಹಿನ್ನೆಲೆ ಅಜ್ಜಿ ಮನೆಗೆ ಬಂದಿದ್ದ ಐವರು ನಾಲೆಗೆ ಈಜಲು ಹೋಗಿ ನೀರು ಪಾಲಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮೃತರೆಲ್ಲರೂ ಬೆಂಗಳೂರಿನ ನೀಲಸಂದ್ರ ನಿವಾಸಿಗಳಾಗಿದ್ದು, ಬೇಸಿಗೆ ರಜೆ ಹಿನ್ನೆಲೆ ಹಲ್ಲೆಗೆರೆಯ ಅಜ್ಜಿ ಮನೆಗೆ ಬಂದಿದ್ದರು. ಇಂದು ದೊಡ್ಡ ಕೊತ್ತಗೆರೆ ಬಳಿಯ ವಿಶ್ವೇಶ್ವರಯ್ಯ ನಾಲೆಗೆ ಈಜಲು ಬಂದಿದ್ದರು. ಈ ವೇಳೆ, ಬಾಲಕನೋರ್ವ ನಾಲೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬಾಲಕನ ರಕ್ಷಣೆಗೆಂದು ಹೋದ ನಾಲ್ವರು ಕೂಡ ನೀರು ಪಾಲಾಗಿದ್ದಾರೆ. ಇದೀಗ ಮೂವರ ಶವ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಘಟನೆ ಸಂಬಂಧ ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿ, ನುರಿತ ಈಜಗಾರರಿಂದ ಶವಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ :ಅಕ್ರಮವಾಗಿ ಮರಳು ತೆಗೆಯಲು ಹೋಗಿದ್ದ ಮೂವರು ಬಾಲಕರು ನೀರು ಪಾಲು..!