ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಕೆರೆ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಐದು ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇಂದು ಶಾಲೆಯಲ್ಲಿ ಸಾಮೂಹಿಕವಾಗಿ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ, ಐವರು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಶಾಲೆಯನ್ನು ಸೀಲ್ಡೌನ್ ಮಾಡಿದ್ದಾರೆ. ಜೊತೆಗೆ ಶಾಲೆಯ ಎಲ್ಲ ಮಕ್ಕಳಿಗೂ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.