ಕರ್ನಾಟಕ

karnataka

ETV Bharat / state

ಕೆ.ಆರ್. ಪೇಟೆಯಲ್ಲಿ ಸಿದ್ದರಾಮಯ್ಯ ಭರ್ಜರಿ ಮತಬೇಟೆ - ಮಾಜಿ ಸಿಎಂ ಸಿದ್ದರಾಮಯ್ಯ ಮತ ಪ್ರಚಾರ

ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ.

ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ ಪ್ರಚಾರ

By

Published : Nov 21, 2019, 4:46 PM IST

Updated : Nov 21, 2019, 8:07 PM IST

ಮಂಡ್ಯ: ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಪ್ರತಿಯೊಂದು ಗ್ರಾಮಗಳಲ್ಲೂ ಆರತಿ ಮಾಡಿ ಸ್ವಾಗತ ಕೋರುತ್ತಿರುವುದು ವಿಶೇಷವಾಗಿದೆ.

ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ ಪ್ರಚಾರ

ಕ್ಷೇತ್ರಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಗರೂರಿನ ಮರಡಿ ಲಿಂಗೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿಸಿದರು. ಪೂಜೆ ನಂತರ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚಿಸಿದರು. ಇನ್ನು ಕಿಕ್ಕೇರಿಗೆ ಹೋದ ಸಿದ್ದರಾಮಯ್ಯಗೆ ಬೃಹತ್ ಸೇಬಿನ ಹಾರವನ್ನು ಕ್ರೇನ್ ಮೂಲಕ ಹಾಕಿ ಸ್ವಾಗತಿಸಲಾಯಿತು. ದಾರಿಯುದ್ದಕ್ಕೂ ಕಾರಿನಲ್ಲೇ ನಿಂತು ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಸೇಬಿಗಾಗಿ ಪ್ರಚಾರ ಕಾರ್ಯಕ್ಕೆ ಬಂದ ಜನತೆ ಕಿತ್ತಾಡಿದ ಘಟನೆ ನಡೆಯಿತು.

ಕ್ಷೇತ್ರದ 4 ಹೋಬಳಿ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲಾಗುತ್ತಿದ್ದು, ಸಿದ್ದರಾಮಯ್ಯಗೆ ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸಾಥ್ ನೀಡಿದ್ದಾರೆ.

Last Updated : Nov 21, 2019, 8:07 PM IST

ABOUT THE AUTHOR

...view details