ಮಂಡ್ಯ:ಕೋವಿಡ್ ನಿಯಂತ್ರಣದಲ್ಲಿ ನೂರಕ್ಕೆ ನೂರರಷ್ಟು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ, ಕಲಬುರಗಿ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಹಲವಾರು ಜನರು ಮೃತಪಟ್ಟಿದ್ದಾರೆ. ಆದರೆ, ಈ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವ್ಯಾಕ್ಸಿನ್ ವಿದೇಶಗಳಿಗೆ ಕೊಡದೇ, ನಮ್ಮ ದೇಶದ ಜನರಿಗೆ ವಿತರಿಸಿದ್ದರೆ ಸಾವಿನ ಪ್ರಮಾಣ ಕಡಿಮೆಯಾಗುತ್ತಿತ್ತು. ಮೋದಿಯವರೇ ಅಮೆರಿಕಾದಲ್ಲಿ ಸೋಂಕು ನಿಯಂತ್ರಿಸಿದ್ದಾರೆ, ನೀವೇನು ಮಾಡಿದ್ದೀರಾ ಎಂದು ಪ್ರಶ್ನಿಸಿದರು.