ಕರ್ನಾಟಕ

karnataka

ETV Bharat / state

ಚಲುವರಾಯಸ್ವಾಮಿ ಬ್ರೈನ್ ಮ್ಯಾಪಿಂಗ್​ ಮಾಡಿದರೆ ಭ್ರಷ್ಟಾಚಾರದ ಸತ್ಯ ಬಯಲಾಗುತ್ತದೆ: ಮಾಜಿ ಶಾಸಕ ಸುರೇಶ್ ಗೌಡ

ಕೃಷಿ ಸಚಿವ ಚಲುವರಾಯಸ್ವಾಮಿ ಮೇಲಿರುವ ಭ್ರಷ್ಟಾಚಾರದ ಆರೋಪ ಸತ್ಯ ಬ್ರೈನ್ ಮ್ಯಾಪಿಂಗ್ ಮಾಡಿದರೆ ಹೊರಬರಲಿದೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

Former MLA Suresh Gowda
ಮಾಜಿ ಶಾಸಕ ಸುರೇಶ್ ಗೌಡ

By

Published : Aug 16, 2023, 12:24 PM IST

ಕೃಷಿ ಸಚಿವ ಚಲುವರಾಯ ಸ್ವಾಮಿ ವಿರುದ್ಧ ಮಾಜಿ ಶಾಸಕ ಸುರೇಶ್ ಗೌಡ ವಾಗ್ದಾಳಿ

ಮಂಡ್ಯ: ಚಲುವರಾಯಸ್ವಾಮಿ 300 - 400 ಕೋಟಿ ಲೂಟಿ ಹೊಡೆದಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ದುಡ್ಡನ್ನು ಏರ್‌ಲಿಫ್ಟ್ ಮಾಡುತ್ತಿದೆ. ಹಿಂದಿನ ಸರ್ಕಾರದಲ್ಲಿ ಜೆಸಿಬಿಯಲ್ಲಿ ಹಣ ತುಂಬುತ್ತಿದ್ದಾರೆ ಎನ್ನುತ್ತಿದ್ದರು. ಆದರೆ, ಈ ಸರ್ಕಾರ ಭ್ರಷ್ಟ ಹಣವನ್ನು ಏರ್‌ಲಿಫ್ಟ್ ಮಾಡುತ್ತಿದೆ. ರಾಜ್ಯವನ್ನೇ ಲೂಟಿ ಹೊಡೆಯುತ್ತಿದ್ದಾರೆ ಎಂದು ಮಂಡ್ಯದಲ್ಲಿ ಕೃಷಿ ಸಚಿವರ ವಿರುದ್ಧ ಮಾಜಿ ಶಾಸಕ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ.

’’ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿ ಅವರಿಗೆ ಮೊದಲ ಸ್ಥಾನ. ಅಧಿಕಾರ ಸಿಕ್ಕಾಗ ಜನಗಳಿಗೆ ಒಳ್ಳೆಯದು ಮಾಡಬೇಕು. ಕಡಿಮೆ ಎಂದರೂ ಇಲ್ಲಿವರೆಗೆ 300-400 ಕೋಟಿ ಲೂಟಿ ಹೊಡೆದಿದ್ದಾರೆ. ಟ್ರಾನ್ಸ್‌ಫರ್‌ನಲ್ಲಿ 150 ಕೋಟಿ, ಜಲಧಾರೆ ಯೋಜನೆ 100 ಕೋಟಿ, ಅಧಿಕಾರಗಳ ಬಳಿ ಲೂಟಿ. 300 ಕೋಟಿ ಚಲುವರಾಯಸ್ವಾಮಿ ಒಬ್ಬರೇ ಮಾಡಿದ್ದಾರೆ. ಇಡೀ ಕಾಂಗ್ರೆಸ್ ಹಣ ಏರ್‌ಲಿಫ್ಟ್ ಮಾಡುತ್ತಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷಕ್ಕೆ ಕರ್ನಾಟಕದಿಂದ ಫಂಡ್ ಹೋಗ್ತಿದೆ. ಜನರೇ ಬಿಜೆಪಿ ಸರ್ಕಾರವೇ ಪರವಾಗಿರಲಿಲ್ಲ ಎಂದು ಹೇಳ್ತಿದ್ದಾರೆ’’ಎಂದು ಸುರೇಶ್​ಗೌಡ ಆರೋಪಿಸುತ್ತಿದ್ದಾರೆ.

ಚಲುವರಾಯಸ್ವಾಮಿಗೆ ಬ್ರೈನ್ ಮ್ಯಾಪಿಂಗ್ ಮಾಡಿ: ಚಲುವರಾಯಸ್ವಾಮಿಗೆ ಬ್ರೈನ್ ಮ್ಯಾಪಿಂಗ್ ಮಾಡಬೇಕು. ಎಲ್ಲೆಲ್ಲಿ ಎಷ್ಟೆಷ್ಟು ತಿಂದಿದ್ದಾರೆ ಗೊತ್ತಾಗುತ್ತದೆ. ಬೆಂಗಳೂರಿನಲ್ಲಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದೆ. ಹೀಗೆ ಎಲ್ಲವೂ ಜನರಿಗೆ ಗೊತ್ತಿದೆ. ಮೆಜೆಸ್ಟಿಕ್‌ನಲ್ಲಿರುವ ಕೋ ಆಪರೇಟಿವ್ ಸೊಸೈಟಿ ಸರಿಯಾಗಿ ತನಿಖೆ ನಡೆಸಿದರೆ ಸಾಕು ಎಲ್ಲಾ ಬಯಲಿಗೆ ಬರುತ್ತೆ. ಎಲ್ಲ ಮುಂದೆ ಗೊತ್ತಾಗುತ್ತೆ ಎಂದು ಶಾಸಕರು ಆರೋಪಿಸಿದ್ದಾರೆ.

ಅಧಿಕಾರಗಳು ಪತ್ರ ಬರೆದದ್ದು ಸತ್ಯ: ಬೆಂಗಳೂರಿ‌ನ 37 ಕ್ರಸೆಂಟ್ ಹೋಟೆಲ್‌ಗೆ ಕರೆಸಿಕೊಂಡು ಅಧಿಕಾರಗಳಿಗೆ ಒತ್ತಡ ಹೇರಿದ್ದಾರೆ. ಎಲ್ಲ ಬಿಗಿ ಭದ್ರತೆ ಮಾಡಿಕೊಂಡು, ಅಧಿಕಾರಗಳ ಬಳಿ ಪತ್ರ ಬರೆದಿಲ್ಲ ಎಂದು ಸುಳ್ಳು ಹೇಳಿದ್ದಾರೆ. 37 ಕ್ರಸೆಂಟ್ ಹೋಟೆಲ್ ಹಾಗೂ ಆ ರಸ್ತೆಯ ಸಿಸಿಟಿವಿ ದೃಶ್ಯ ತೆಗೆಸಿ. ಆಗ ಯಾವ ಎಡಿ, ಜೆಡಿ ಯಾರೆಲ್ಲಾ ಹೋಗಿದ್ರು ತಿಳಿಯುತ್ತದೆ. ಪೊಲೀಸರು ಇವ್ರನ್ನ ಕೇಳಿ ತನಿಖೆ ಮಾಡ್ತಾರೆ. ಅಮಾಯಕರನ್ನ ಸಿಲುಕಿಸುವ ಪ್ರಯತ್ನ ಮಾಡ್ತಾರೆ. ಜೆಡಿ, ಎಡಿಗಳನ್ನ ಬ್ರೈನ್ ಮ್ಯಾಪಿಂಗ್ ಮಾಡಿದ್ರೆ ಎಷ್ಟು ದುಡ್ಡು ಕೊಟ್ಟಿದ್ದೀವಿ ಅಂತ ಬಾಯಿ ಬಿಡ್ತಾರೆ. ಬ್ರೈನ್ ಮ್ಯಾಪಿಂಗ್ ನಮನಗಲ್ಲ, ಚಲುವರಾಯಸ್ವಾಮಿಗೆ. ಎಲ್ಲೆಲ್ಲಿ ಎಷ್ಟೆಷ್ಟು ತಿಂದಿದ್ದಾನೆ ತಿಳಿಯಬೇಕು ಅಲ್ವಾ ಎಂದು ವಾಗ್ದಾಳಿ ನಡೆಸಿದರು.

ಜಮೀರ್​ ಮತ್ತು ಚಲುವರಾಯಸ್ವಾಮಿ ನಡುವೆ ಬಿರುಕು: ಸಚಿವರಾದ ಜಮೀರ್, ಚಲುವರಾಯಸ್ವಾಮಿ ಕಳೆದ ಏಳೆಂಟು ತಿಂಗಳಿಂದ ಮಾತನಾಡ್ತಿಲ್ಲ. ಸಚಿದ್ವಯರ ನಡುವೆ ಮಾತಿಲ್ಲ, ಕತೆಯಿಲ್ಲ.‌ ದೋಸ್ತಿಗಳ ನಡುವೆ ಮಹಾ ಬಿರುಕು ಉಂಟಾಗಿದೆ. ಚಲುವರಾಯಸ್ವಾಮಿ ಪರ ಕ್ಯಾಂಪೇನ್​ಗೂ ಬರಲಿಲ್ಲ. ಮುನಿಸಿಗೆ ಕಾರಣ ಏನೆಂದು ಚೆಲುವರಾಯಸ್ವಾಮಿ ಉತ್ತರ ಕೊಡ್ತಾರಾ.?. ಎಲ್ಲೆಲ್ಲಿ ಜಮೀರ್ ಹೆಸರು ದುರ್ಬಳಕೆ ಆಗಿತ್ತು, ಏನೇನಾಗಿತ್ತು ಮುಂದಿನ ದಿನಗಳಲ್ಲಿ ತಿಳಿಸ್ತೀನಿ. ಕುಮಾರಸ್ವಾಮಿ ಫಾರೀನ್​ಗೆ ಹೋಗುವ ಬಗ್ಗೆ ಮಾತನಾಡ್ತಾನೆ. ಕುಮಾರಣ್ಣ ಯಾವುದಾದರೂ ಕ್ಯಾಸಿನೋಗೆ ಇಸ್ವೀಟ್ ಆಡೋಕೆ ಹೋಗಿದ್ರಾ.? ಎಂದು ಏಕವಚನದಲ್ಲಿ ಚಲುವರಾಯಸ್ವಾಮಿ ವಿರುದ್ಧ ಸುರೇಶ್ ಗೌಡ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಆಕ್ಷೇಪಾರ್ಹ ಪದ ಬಳಕೆ ಆರೋಪದ ವಿಡಿಯೋ ವೈರಲ್​: ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್​ ಸ್ಪಷ್ಟನೆ

ABOUT THE AUTHOR

...view details