ಮಂಡ್ಯ: ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ.ಮಾದೇಗೌಡ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ ಎಂ ದೊಡ್ಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಗುರುದೇವರಹಳ್ಳಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ :ನಾಳೆ ಬೆಳಗ್ಗೆ ಮಂಡ್ಯದ ಬಂಧೀಗೌಡ ಬಡಾವಣೆಯಲ್ಲಿರುವ ಮಾದೇಗೌಡರ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗುವುದು. ನಂತರ ಗಾಂಧಿ ಭವನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲಿಂದ ಮದ್ದೂರು ಮುಖಾಂತರ ಹುಟ್ಟೂರು ಗುರುದೇವರಹಳ್ಳಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.