ಕರ್ನಾಟಕ

karnataka

ETV Bharat / state

ಮಂಡ್ಯ: ಟ್ಯೂಶನ್‍ಗೆ ಹೋಗಿದ್ದ ವಿದ್ಯಾರ್ಥಿನಿ ಸಂಪ್‍ನಲ್ಲಿ ಶವವಾಗಿ ಪತ್ತೆ - 10 ವರ್ಷದ ಬಾಲಕಿಯ ಶವ ಪತ್ತೆ

ಟ್ಯೂಶನ್‍ಗೆ ಹೋದ ವಿದ್ಯಾರ್ಥಿನಿ ನೀರಿನ ಸಂಪ್‍ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.

body found
ಶವ ಪತ್ತೆ

By

Published : Oct 12, 2022, 11:23 AM IST

ಮಂಡ್ಯ: ಟ್ಯೂಶನ್‌ಗೆ ತೆರಳಿದ್ದ ವಿದ್ಯಾರ್ಥಿನಿ ನೀರಿನ ಸಂಪ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.

ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದಲ್ಲಿ 10 ವರ್ಷದ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಮಂಗಳವಾರ ಬೆಳಗ್ಗೆ ಟ್ಯೂಶನ್‌ಗಾಗಿ ಮನೆಯಿ೦ದ ಹೋಗಿದ್ದ ವಿದ್ಯಾರ್ಥಿನಿ ಬಳಿಕ ಮನೆಗೆ ವಾಪಸ್​ ಬಾರದ ಹಿನ್ನೆಲೆ ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ಪೋಷಕರು ವಿಚಾರಿಸಿದ್ದಾರೆ. ಎಲ್ಲಿಯೂ ಬಾಲಕಿ ಪತ್ತೆಯಾಗಿಲ್ಲ. ಬಳಿಕ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿ ಪರಿಶೀಲಿಸಿದಾಗ ನೀರಿನ ಸಂಪ್ ಒಳಗೆ ಬಾಲಕಿಯ ಶವ ಪತ್ತೆಯಾಗಿದೆ.

ಇದನ್ನೂ ಓದಿ:ಬಳ್ಳಾರಿ: ಮಲಗಿದ್ದ ಬಾಲಕಿಗೆ ಹಾವು ಕಚ್ಚಿ ಸಾವು

ಇನ್ನು, ವಿದ್ಯಾರ್ಥಿನಿಯ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಡಿವೈಎಸ್​ಪಿ ಎನ್.ನವೀನ್‌ ಕುಮಾರ್, ಸಿಪಿಐ ಎ.ಕೆ. ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details