ಮಂಡ್ಯ: ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕಿಯೊಬ್ಬಳು ಬಲಿಯಾದ ಘಟನೆ ಕೃಷ್ಣರಾಜಪೇಟೆ ತಾಲ್ಲೂಕಿನ ಸಾಧುಗೋನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಂಕಿತ ಡೆಂಗ್ಯೂಗೆ ಬಾಲಕಿ ಬಲಿ: ಆತಂಕದಲ್ಲಿ ಮಂಡ್ಯ ಜನ - ಪ್ರಥಮ ಚಿಕಿತ್ಸೆ
ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕಿವೋರ್ವಳು ಬಲಿಯಾದ ಘಟನೆ ಕೃಷ್ಣರಾಜಪೇಟೆ ತಾಲೂಕಿನ ಸಾಧುಗೋನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಂಜು ಎಂಬುವರ ಪುತ್ರಿ ಮನ(6) ಸಾವಿಗೀಡಾಗಿದ್ದು, ಶಂಕಿತ ಡೆಂಗ್ಯೂ ಹಿನ್ನಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಜ್ವರದಿಂದ ಬಳಲುತ್ತಿದ್ದ ಮನಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಇಂದು ಸಂಜೆ 5 ಗಂಟೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾಳೆ ಎಂದು ತಿಳಿದು ಬಂದಿದೆ.