ಮಂಡ್ಯ :ಪ್ರತಿ ಹಳ್ಳಿ ಹಳ್ಳಿಗೆ ತೆರಳಿ ಮಕ್ಕಳ ಹಕ್ಕುಗಳ ಬಗ್ಗೆ ಚರ್ಚಿಸಲಾಗುತ್ತೆ ಎಂದು ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷ ಡಾ.ಆಂಟೋನಿ ಸೆಬಾಸ್ಟಿಯನ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಸಿಗುವ ಸೌಲಭ್ಯ ಹಾಗೂ ಮಕ್ಕಳ ಹಕ್ಕು ಎಲ್ಲಿ ಉಲ್ಲಂಘನೆಯಾಗುತ್ತದೆಯೋ ಅಂತಹ ಹಳ್ಳಿಗಳನ್ನು ಆಯ್ಕೆ ಮಾಡಿ ಮಕ್ಕಳ ಜೊತೆ ಸಂವಾದ ನಡೆಸಲಾಗುತ್ತದೆ ಎಂದರು.
ಪ್ರತಿ ಹಳ್ಳಿಗೂ ತೆರಳಿ ಮಕ್ಕಳ ಹಕ್ಕುಗಳ ಬಗ್ಗೆ ಚರ್ಚೆ.. ಆಂಟೋನಿ ಸೆಬಾಸ್ಟಿಯನ್ ಮಂಡ್ಯ ಜಿಲ್ಲೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣ ಹೆಚ್ಚಾಗುತ್ತಿದೆ ಎಂಬ ಕುರಿತು ಮಾಹಿತಿ ಇದೆ. ಜನಪ್ರತಿನಿಧಿಗಳೇ ಅಂತವರಿಗೆ ಸಪೋರ್ಟ್ ಮಾಡ್ತಿದ್ದಾರೆ ಅಂತಾ ಹೇಳ್ತಿದ್ದಾರೆ.
ಈ ನಿಟ್ಟಿನಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ ತಡೆಗಟ್ಟುವ ಬಗ್ಗೆ ಅರಿವು ಮೂಡಿಸಬೇಕಿದೆ ಎಂದರು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಬಾರದು ಎಂದು ತಿಳಿಸಿದ ಅವರು, ಉಲ್ಲಂಘನೆ ಮಾಡಿದಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಗುಡಿಸಲಿಗೆ ಬೆಂಕಿ: ಎರಡು ಹಸುಗಳು ಜೀವಂತ ದಹನ