ಮಂಡ್ಯ: ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಗೆ ದುಷ್ಕರ್ಮಿಗಳು ಚೂರಿ ಇರಿದು ಸರಗಳ್ಳತನ ಮಾಡಿರುವ ಘಟನೆ ತಾಲೂಕಿನ ಕೊಮ್ಮೇರಹಳ್ಳಿಯಲ್ಲಿ ನಡೆದಿದೆ.
ಮಂಡ್ಯ: ಮಹಿಳೆಗೆ ಚೂರಿ ಇರಿದು ಮಾಂಗಲ್ಯ ಸರ ಎಗರಿಸಿದ ಖದೀಮರು - Mandya Rural Police Station
ದೇವಾಲಯಕ್ಕೆ ತೆರಳುತ್ತಿದ್ದ ಮಹಿಳೆಗೆ ಚೂರಿ ಇರಿದು ಸರಗಳ್ಳತನ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿಯಲ್ಲಿ ನಡೆದಿದೆ.
ಮಹಿಳೆಗೆ ಚಾಕು ಇರಿದು ಮಾಂಗಲ್ಯ ಸರ ಎಗರಿಸಿದ ಖದೀಮರು
ಪುಷ್ಪಲತಾ (35) ಗಂಭೀರವಾಗಿ ಗಾಯಗೊಂಡವರು. ಗ್ರಾಮದ ಬಳಿಯಿರುವ ಕಂಬದ ನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚೂರಿ ಇರಿದು ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಮಹಿಳೆಯನ್ನು ಚಿಕಿತ್ಸೆಗೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.