ಮಂಡ್ಯ :ಸರ್ಕಾರಿ ನೌಕರನೊಬ್ಬ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ಪಟ್ಟಣದಲ್ಲಿ ನಡೆದಿದೆ.
ವೆಂಕಟೇಶ್ ಎಂಬುವರು ಮೃತ ನೌಕರ ಎಂದು ಗುರುತಿಸಲಾಗಿದೆ. ಈತ ಕಳೆದ ಎಂಟು ವರ್ಷಗಳಿಂದ ಮದ್ದೂರು ತಾಲೂಕು ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಆದರೆ, ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಕಚೇರಿ ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಡ್ಯದಲ್ಲಿ ಸರ್ಕಾರಿ ನೌಕರನೊಬ್ಬ ಆತ್ಮಹತ್ಯೆಗೆ ಶರಣು ಇದನ್ನು ಗಮನಿಸಿದ ಕಚೇರಿ ಸಿಬ್ಬಂದಿ ತಕ್ಷಣ ನೌಕರನನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಘಟನೆಗೆ ಈವರೆಗೂ ಕಾರಣ ತಿಳಿದು ಬಂದಿಲ್ಲ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದೆ. ಈ ಕುರಿತು ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪತ್ನಿಯ ಅಶ್ಲೀಲ ವಿಡಿಯೋ ಸೆರೆಹಿಡಿದು ಪತಿಯಿಂದ ವರದಕ್ಷಿಣೆ ಕಿರುಕುಳ: ಪ್ರಕರಣ ದಾಖಲು