ಮಂಡ್ಯ:ಅವರವರಿಗೆ ಇಷ್ಟವಾದಂತೆ ಏನು ಹೇಳಿಕೆ ಬೇಕೋ ಅದನ್ನು ಕೊಡುತ್ತಾರೆ. ಯಾರಿಗೂ ಏನು ಹೇಳಿಕೆ ಕೊಡಬೇಕೆಂದು ಹೇಳಲು ಸಾಧ್ಯವಿಲ್ಲ. ಒಟ್ಟಾರೆ ಮೀಸಲಾತಿ ವಿಚಾರದಲ್ಲಿ ಸರ್ಕಾರ ವೈಜ್ಞಾನಿಕವಾಗಿ ಕ್ರಮ ಕೈಗೊಳ್ಳುತ್ತದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದರು.
ನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿಚಾರದ ಬಗ್ಗೆ ಸರ್ಕಾರ ಕಾನೂನು ಬದ್ಧವಾಗಿ ತೀರ್ಮಾನ ತೆಗೆದುಕೊಳ್ಳುತ್ತದೆ. ಇದಕ್ಕಿಂತ ಬೇರೇನೂ ಹೇಳಲು ಸಾಧ್ಯವಿಲ್ಲ ಎಂದರು.
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹದ ಲೆಕ್ಕ ಕೊಡವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲೆಕ್ಕ ಕೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ, ಲೆಕ್ಕ ಕೊಡುತ್ತೀವಿ. ಸಾರ್ವಜನಿಕವಾಗಿ ಪ್ರತಿಯೊಬ್ಬರು ದೇಣಿಗೆ ಕೊಟ್ಟಿದ್ದಾರೆ. ಇಲ್ಲಿ ಯಾರನ್ನು ಒತ್ತಾಯ ಮಾಡಿಲ್ಲ, ಎಲ್ಲರೂ ಸಹಕರಿಸಿದ್ದಾರೆ ಎಂದರು.