ಮಂಡ್ಯ :ಸಕ್ಕರೆ ನಾಡಿನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಅಖಾಡ ಸಿದ್ಧವಾಗಿದೆ. ಸದಸ್ಯರ ಆಯ್ಕೆಗೆ ಲಕ್ಷ ಲಕ್ಷ ಹರಾಜು ಪ್ರಕ್ರಿಯೆ ನಡೆದಿದ್ದು ಬಾರಿ ಸದ್ದು ಮಾಡಿತ್ತು. ಹರಾಜು ಆರೋಪದ ನಡುವೆಯೂ ಇದೀಗ ಜಿಲ್ಲೆಯಲ್ಲಿ ಹಲವಾರು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆ : 6 ಹಳ್ಳಿಗಳ 12 ಸದಸ್ಯರ ಸ್ಥಾನಕ್ಕೆ ಅವಿರೋಧ ಆಯ್ಕೆ - Mandya Gram panchayath members
ಕರಿದೊಡ್ಡಿ, ಮಾರದೇವನಹಳ್ಳಿ, ಹೊಸಹಳ್ಳಿದೊಡ್ಡಿ, ವಡ್ಡರದೊಡ್ಡಿ ಗ್ರಾಮಗಳಲ್ಲಿ ಸದಸ್ಯರ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿರುವುದರಿಂದ ಚುನಾವಣೆ ರದ್ದಾಗಿದೆ. ಯಾವುದೇ ಗೊಂದಲವಿಲ್ಲದೆ ಆಯ್ಕೆ ಪ್ರಕ್ರಿಯೆ ನಡೆದಿರುವುದು ಉತ್ತಮ ಬೆಳವಣಿಗೆ..
ಮಂಡ್ಯ ಜಿಲ್ಲೆಯಲ್ಲಿ ಗ್ರಾಪಂ ಚುನಾವಣೆಯ ಸದಸ್ಯರ ಸ್ಥಾನಕ್ಕೆ ಬಾರಿ ಪೈಪೋಟಿ ನಡೆಯುತ್ತಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಕದಲೂರು ಗ್ರಾಪಂ ವ್ಯಾಪ್ತಿಯ 6 ಹಳ್ಳಿಗಳ 12 ಸದಸ್ಯರ ಸ್ಥಾನಕ್ಕೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಊರಿನ ಜನರ ಬೆಂಬಲ ಕೂಡ ವ್ಯಕ್ತವಾಗ್ತಿದ್ದು, ಗ್ರಾಮದ ಅಭಿವೃದ್ಧಿಗಾಗಿ ಈ ರೀತಿಯ ಆಯ್ಕೆ ಪ್ರಕ್ರಿಯೆ ನಡೆದಿದೆ ಎನ್ನಲಾಗುತ್ತಿದೆ.
ಇನ್ನು ಕರಿದೊಡ್ಡಿ, ಮಾರದೇವನಹಳ್ಳಿ, ಹೊಸಹಳ್ಳಿದೊಡ್ಡಿ, ವಡ್ಡರದೊಡ್ಡಿ ಗ್ರಾಮಗಳಲ್ಲಿ ಸದಸ್ಯರ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿರುವುದರಿಂದ ಚುನಾವಣೆ ರದ್ದಾಗಿದೆ. ಯಾವುದೇ ಗೊಂದಲವಿಲ್ಲದೆ ಆಯ್ಕೆ ಪ್ರಕ್ರಿಯೆ ನಡೆದಿರುವುದು ಉತ್ತಮ ಬೆಳವಣಿಗೆ ಎಂದು ಮದ್ದೂರು ತಹಶೀಲ್ದಾರ್ ವಿಜಯ್ ಕುಮಾರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.