ಮಂಡ್ಯ: ಜಿಲ್ಲೆಯ ಗಡಿ ಭಾಗವಾದ ಮದ್ದೂರಿಗೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಚಿವ ಕೆ.ಸಿ.ನಾರಾಯಣ ಗೌಡ ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ತಾಲ್ಲೂಕಿನ ನಿಡಘಟ್ಟ ಗ್ರಾಮ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದ ಕರಂದ್ಲಾಜೆ ಪರಿಶೀಲನೆ ನಡೆಸಿದರು.
ಮದ್ದೂರಿಗೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಅದ್ಧೂರಿ ಸ್ವಾಗತ - Grans Welcome to Union minister Shobha Karandlaje news
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ನಿಡಘಟ್ಟ ಗ್ರಾಮ ನ್ಯಾಯಬೆಲೆ ಅಂಗಡಿಗೆ ಕೇಂದ್ರ ಸಚಿವೆ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮದ್ದೂರಿಗೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಬೈಕ್ ರ‍್ಯಾಲಿ ಮೂಲಕ ಸ್ವಾಗತ:
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬೈಕ್ ರ‍್ಯಾಲಿ ಮೂಲಕ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸಚಿವ ಕೆ.ಸಿ.ನಾರಾಯಣ ಗೌಡ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.