ಮಂಡ್ಯ: ನಾನು ವಿಧಾನಸಭೆ ಸದಸ್ಯನಲ್ಲ. ಬಜೆಟ್ ಬಗ್ಗೆ ಮಾತನಾಡಲ್ಲ. ಸಿದ್ದರಾಮಯ್ಯ ಇದ್ದಾರೆ, ಅವರು ಮಾತನಾಡುತ್ತಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.
ಬಜೆಟ್ ಕುರಿತು ಸಿದ್ದರಾಮಯ್ಯ ಮಾತನಾಡುತ್ತಾರೆ: ದೇವೇಗೌಡ - ಅಧಿಕೃತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ನಾನು ವಿಧಾನಸಭೆ ಸದಸ್ಯನಲ್ಲ. ಬಜೆಟ್ ಬಗ್ಗೆ ಮಾತನಾಡಲ್ಲ. ಸಿದ್ದರಾಮಯ್ಯ ಇದ್ದಾರೆ, ಅವರು ಮಾತನಾಡುತ್ತಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.
ಎಚ್.ಡಿ. ದೇವೇಗೌಡ.
ಅಧಿಕೃತ ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಇದ್ದಾರೆ. ಅತಿ ಹೆಚ್ಚು ಬಜೆಟ್ ಕೂಡ ಮಂಡನೆ ಮಾಡಿದ್ದಾರೆ. ಹೀಗಾಗಿ ಅವರು ಮಾತನಾಡುತ್ತಾರೆ ಎಂದರು.
ಮಂಡ್ಯಕ್ಕೆ ಅನುದಾನ ಕೊರತೆ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಕುಮಾರಸ್ವಾಮಿ ಹಾಗೂ ಪುಟ್ಟರಾಜು ಅಧ್ಯಯನ ಮಾಡಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ಮಾಡಲಿದ್ದಾರೆ. ಜಿಲ್ಲೆಯಲ್ಲಿ ನಮ್ಮ ಕಾರ್ಯಕರ್ತರಿಗೆ ತೊಂದರೆ ಉಂಟಾದರೆ ಪ್ರತಿಭಟನೆ ಮಾಡಲು ಸಿದ್ಧನಿದ್ದೇನೆ ಎಂದರು.