ಮಂಡ್ಯ :ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೊರೊನಾ ರೂಲ್ಸ್ ಬ್ರೇಕ್ ಮಾಡಿರುವ ಘಟನೆ ನಗರದ ಅಂಬೇಡ್ಕರ್ ಭವನದಲ್ಲಿ ನಡೆದಿದೆ.
ಕೋವಿಡ್ ನಿಯಮ ಗಾಳಿಗೆ ತೂರಿ ಖಾಸಗಿ ಕಾರ್ಯಕ್ರಮದಲ್ಲಿ ಹೆಚ್ಡಿಕೆ ಭಾಗಿ - ಕೊರೊನಾ ನಿಯಮ ಉಲ್ಲಂಘಿಸಿದ ಹೆಚ್ಡಿ ಕುಮಾರಸ್ವಾಮಿ
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ ಬಿ ಶ್ರೀನಿವಾಸ್ ಅಭಿನಂದನಾ ಕಾರ್ಯಕ್ರಮಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಸಿಎಂ ಹೆಚ್‌ಡಿಕೆಗೆ ಸ್ವಾಗತ ಕೋರಲು ಬೆಂಬಲಿಗರು ಮಾಸ್ಕ್, ಸಾಮಾಜಿಕ ಅಂತರ ಮರೆತು ಗುಂಪುಗುಂಪಾಗಿ ಸೇರಿದ್ದರು..
ಕೋವಿಡ್ ನಿಯಮ
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ ಬಿ ಶ್ರೀನಿವಾಸ್ ಅಭಿನಂದನಾ ಕಾರ್ಯಕ್ರಮಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಸಿಎಂ ಹೆಚ್‌ಡಿಕೆಗೆ ಸ್ವಾಗತ ಕೋರಲು ಬೆಂಬಲಿಗರು ಮಾಸ್ಕ್, ಸಾಮಾಜಿಕ ಅಂತರ ಮರೆತು ಗುಂಪುಗುಂಪಾಗಿ ಸೇರಿದ್ದರು.
ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸರ್ಕಾರ ಹೆಚ್ಚು ಜನ ಸೇರದಂತೆ ಆದೇಶ ಹೊರಡಿಸಿದೆ. ಆದ್ರೂ ಸಹ ಇದ್ಯಾವುದಕ್ಕೂ ಕ್ಯಾರೆ ಎನ್ನದ ಮಾಜಿ ಸಿಎಂ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಕೊರೊನಾ ನಿಯಮ ಗಾಳಿಗೆ ತೂರಿದ್ದಾರೆ.