ಮಂಡ್ಯ:ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಕಟ್ಟೇರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಚಿನ್ಮಯಾನಂದ ಮೂರ್ತಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಆರ್.ವಿಶಾಲ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿ ನಿಲಯದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕನಿಗೆ ಇತ್ತೀಚೆಗೆ ವಿದ್ಯಾರ್ಥಿನಿಯರು ಕೋಲು ಮತ್ತು ಕಸಬರಿಕೆ ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದರು. ಈ ಘಟನೆ ಗ್ರಾಮದವರಿಗೆ ತಿಳಿದು ಗ್ರಾಮಸ್ಥರು ಶಿಕ್ಷಕನನ್ನು ಹಿಡಿದು ಪೊಲೀಸರಿಗೆ ನೀಡಿದ್ದರು. ಬಂಧನಕ್ಕೆ ಒಳಗಾದ ಶಿಕ್ಷಕನನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿದೆ.