ಕರ್ನಾಟಕ

karnataka

ETV Bharat / state

ರಾತ್ರಿ ಮಳೆಗೆ ಹೈರಾಣದ ಮಳವಳ್ಳಿ: ಸರ್ಕಾರಿ ಕಚೇರಿಗಳಿಗೆ ನುಗ್ಗಿದ ನೀರು - latest news of mandya

ಕಳೆದ ರಾತ್ರಿ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಭಾರೀ ಮಳೆಯಾಗಿದ್ದು, ವಾಣಿಜ್ಯ ಕಟ್ಟಡಗಳು ಸೇರಿದಂತೆ ಕೇಂದ್ರ ಸರ್ಕಾರದ ಕಚೇರಿಗಳಿಗೆ ಮಳೆ ನೀರು ನುಗ್ಗಿದ್ದು ಜನ ಕಂಗಾಲಾಗಿದ್ದಾರೆ.

ರಾತ್ರಿ ಮಳೆಗೆ ಹೈರಾಣದ ಮಂಡ್ಯ: ಕೇಂದ್ರ ಸರ್ಕಾರಿ ಕಚೇರಿಗಳಿಗೆ ನುಗ್ಗಿದ ನೀರು

By

Published : Oct 8, 2019, 11:21 AM IST

ಮಂಡ್ಯ: ಕಳೆದ ರಾತ್ರಿ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಭಾರೀ ಮಳೆಯಾಗಿದ್ದು, ವಾಣಿಜ್ಯ ಕಟ್ಟಡಗಳು ಸೇರಿದಂತೆ ಕೇಂದ್ರ ಸರ್ಕಾರದ ಕಚೇರಿಗಳಿಗೆ ಮಳೆ ನೀರು ನುಗ್ಗಿದೆ.

ರಾತ್ರಿ ಮಳೆಗೆ ಹೈರಾಣದ ಮಂಡ್ಯ: ಕೇಂದ್ರ ಸರ್ಕಾರಿ ಕಚೇರಿಗಳಿಗೆ ನುಗ್ಗಿದ ನೀರು

ಕೆಲವು ಮನೆಗಳಿಗೂ ನೀರು ನುಗ್ಗಿ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ಅನಂತರಾಮ್ ವೃತ್ತದಲ್ಲಿ ಇರುವ ಬಿಎಸ್‌ಎನ್‌ಎಲ್ ಹಾಗೂ ಅಂಚೆ ಕಚೇರಿಗೂ ನೀರು ನುಗ್ಗಿದ್ದು, ಕಚೇರಿಗೆ ಸಿಬ್ಬಂದಿ ಬಾರದ ಹಿನ್ನೆಲೆಯಲ್ಲಿ ಒಳಗೆ ಏನಾಗಿದೆ ಎಂಬುದು ತಿಳಿದಿಲ್ಲ. ಆದರೆ, ಜನರೇಟರ್ ನೀರಿನಲ್ಲಿ ಮುಳುಗಿ ಹೋಗಿದೆ. ಹೀಗಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆಯೆಂದು ಹೇಳಲಾಗುತ್ತಿದೆ.

ಸದ್ಯ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ನೀರು ಹೊರ ಹಾಕುವ ಪ್ರಯತ್ನ ಮಾಡುತ್ತಿದ್ದು, ನಾಗರಿಕರು ಸಹಾಯಕ್ಕೆ ಮುಂದಾಗಿದ್ದಾರೆ.

ABOUT THE AUTHOR

...view details