ಕರ್ನಾಟಕ

karnataka

ETV Bharat / state

ಬೆಂಗಳೂರಿಗೆ ನೀರು ಪೂರೈಸುವ ಘಟಕ ಜಲಾವೃತ : ಮಂಡ್ಯಕ್ಕೆ ಸಿಎಂ ಭೇಟಿ ಸಾಧ್ಯತೆ

ಬೆಂಗಳೂರಿಗೆ ನೀರು ಸರಬರಾಜು ಮಾಡುವ ಜಲಮಂಡಳಿಯ ಜಲರೇಚಕ ಯಂತ್ರಗಾರ ನಿನ್ನೆ ಸುರಿದ ಭಾರಿ ಮಳೆಯಿಂದ ಜಲಾವೃತವಾಗಿದೆ. ಇದರಿಂದ ಬೆಂಗಳೂರಿಗೆ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.

heavy rain in Mandya
ಬೆಂಗಳೂರಿಗೆ ನೀರು ಪೂರೈಸುವ ಘಟಕ ಜಲಾವೃತ

By

Published : Sep 5, 2022, 2:44 PM IST

ಮಂಡ್ಯ :ಜಿಲ್ಲೆಯಲ್ಲಿ ಮತ್ತೆ ಮಳೆ ಆರ್ಭಟ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿರುವ ಬೆಂಗಳೂರಿಗೆ ನೀರು ಸರಬರಾಜು ಮಾಡುವ ಜಲಮಂಡಳಿಯ ಜಲರೇಚಕ ಯಂತ್ರಗಾರವೇ ಜಲಾವೃತಗೊಂಡಿದೆ. ಇದರಿಂದಾಗಿ ಬೆಂಗಳೂರಿಗೆ ನೀರು ಸರಬರಾಜು ಮಾಡುವುದಕ್ಕೆ ಭಾರಿ ವ್ಯತ್ಯಾಸವಾಗುವ ಸಾಧ್ಯತೆ ಇದೆ.

ಮಳವಳ್ಳಿ ತಾಲೂಕಿನ ತೋರೆಕಾಡನಹಳ್ಳಿಯಲ್ಲಿರುವ ಜಲಮಂಡಳಿಯಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜಲಮಂಡಳಿಯ ಯಂತ್ರಾಗಾರಕ್ಕೆ ನೀರು ನುಗ್ಗಿದೆ. ಇದರಿಂದಾಗಿ ಮಿಷನರಿಗಳಿಗೆ ಹಾನಿಯಾಗಿರುವ ಸಾಧ್ಯತೆ ಇದೆ. ಟಿಕೆ ಹಳ್ಳಿ ಜಲಮಂಡಳಿ ಮೂಲಕವೇ ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಇದು ಈಗ ಬಂದ್​ ಆಗುವ ಸಾಧ್ಯತೆಯಿದೆ.

ಬೆಂಗಳೂರಿಗೆ ನೀರು ಪೂರೈಸುವ ಘಟಕ ಜಲಾವೃತ

ಸಿಎಂ ದಿಢೀರ್​ ಭೇಟಿ : ಆದ್ದರಿಂದ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇಂದು ಸಂಜೆಯೊಳಗೆ ಆಗಮಿಸುವ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ತೊಂದರೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ಓದಿ :ಮಹಾಮಳೆಗೆ ಮುಳುಗಿದ ಮಹಾನಗರಿ: ಭಾರಿ ಮಳೆಗೆ ನದಿಯಂತಾದ ಬೆಂಗಳೂರು ರಸ್ತೆಗಳು

ABOUT THE AUTHOR

...view details