ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಭಾರಿ ಮಳೆಗೆ ಮನೆಗೆ ಹೊಕ್ಕ ನೀರು ... ರಂಜಾನ್ ಖುಷಿಯಲ್ಲಿದ್ದವರಿಗೆ ಶಿವರಾತ್ರಿ

ಮಂಡ್ಯದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದೆ, ಇದರಿಂದ ಮನೆಯಲ್ಲಿ ಶೇಖರಿಸಿಟ್ಟ ಆಹಾರ ವಸ್ತುಗಳು ಸೇರಿದಂತೆ ಇತರೆ ವಸ್ತುಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡಬೇಕಾಯಿತು.

ಭಾರಿ ಮಳೆಗೆ ಮನೆಗೆ ಹೊಕ್ಕ ನೀರು

By

Published : Jun 1, 2019, 12:18 PM IST

ಮಂಡ್ಯ : ಕಳೆದ ರಾತ್ರಿ ಸುರಿದ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ನಗರದ ಬೀಡಿ ಕಾರ್ಮಿಕರ ಕಾಲೋನಿಯ ಮನೆಗಳಿಗೆ ನೀರು ನುಗ್ಗಿದ್ದರಿಂದ ರಂಜಾನ್ ಖುಷಿಯಲ್ಲಿದ್ದ ನಾಗರಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಮಂಡ್ಯದಲ್ಲಿ ಮಳೆ ಅವಾಂತರ

ರಾತ್ರಿ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದೆ, ಇದರಿಂದ ಮನೆಯಲ್ಲಿ ಶೇಖರಿಸಿಟ್ಟ ಆಹಾರ ವಸ್ತುಗಳು ಸೇರಿದಂತೆ ಇತರೆ ವಸ್ತುಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡಬೇಕಾಯಿತು. ರಾತ್ರಿ ನಿದ್ರೆ ಮಾಡದೆ ಮಳೆ ನೀರನ್ನು ತೋಡಿ ಹೊರ ಹಾಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮಳೆಯಿಂದಾಗಿ ಪದೇ ಪದೇ ಮನೆಗಳಿಗೆ ನೀರು ನುಗ್ಗುತ್ತಿದೆ. ಇಷ್ಟಾದರೂ ನಗರಸಭೆ ಅಧಿಕಾರಿಗಳು, ಶಾಸಕರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details