ಮಂಡ್ಯ: ಕೆಆರ್‌ಎಸ್‌ನ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ನಿಷೇಧಕ್ಕೆ ಆಗ್ರಹಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳ ಮುಖಂಡರು ಕೆಆರ್‌ಎಸ್‌ನ ಉತ್ತರ ದ್ವಾರದಿಂದ ಶ್ರೀರಂಗಪಟ್ಟಣದ ತಹಶೀಲ್ದಾರ್ ಕಚೇರಿವರೆಗೂ ಪಾದಯಾತ್ರೆ ನಡೆಸಿದರು.
ಕೆಆರ್‌ಎಸ್ ಉಳಿವಿಗಾಗಿ ಪಾದಯಾತ್ರೆ: ಅಣೆಕಟ್ಟೆಗೆ ಕಾದಿದೆಯಾ ಅಪಾಯ? - ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳ ಪ್ರತಿಭಟನೆ
ಕೆಆರ್‌ಎಸ್ ವ್ಯಾಪ್ತಿಯಲ್ಲಿ ಸರ್ಕಾರ ಪ್ರಭಾವಿಗಳ ಒತ್ತಡಕ್ಕೆ ಮಣಿದು ಗಣಿಗಾರಿಕೆಗೆ ಅವಕಾಶ ನೀಡುತ್ತಿದೆ. ಕೂಡಲೇ ಅದನ್ನು ನಿಲ್ಲಿಸಬೇಕು ಎಂದು ವಿವಿಧ ಸಂಘಟನೆಗಳು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಸಂಘಟನೆಗಳ ಪ್ರತಿಭಟನೆ
ಪ್ರಕೃತಿ ವಿಕೋಪ ನಿರ್ವಹಣೆ ಮಂಡಳಿ 2018ರ ಸೆಪ್ಟೆಂಬರ್‌ನಲ್ಲಿ ನೀಡಿದ ವರದಿ ಆಧರಿಸಿ ಪಾದಯಾತ್ರೆ ಆರಂಭ ಮಾಡಲಾಗಿದೆ. ವರದಿಯಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್‌ಗೆ ಅಪಾಯ ಎಂದು ಹೇಳಲಾಗಿದ್ದು, ಹೀಗಾಗಿ ಅಣೆಕಟ್ಟೆ ರಕ್ಷಣೆಗೆ ಸಂಘಟನೆಗಳು ಮುಂದಾಗಿವೆ.
ಸರ್ಕಾರ ಪ್ರಭಾವಿಗಳ ಒತ್ತಡಕ್ಕೆ ಮಣಿದು ಗಣಿಗಾರಿಕೆಗೆ ಅವಕಾಶ ನೀಡುತ್ತಿದೆ. ಕೂಡಲೇ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.