ಮಂಡ್ಯ: ಕೊರೊನಾದಿಂದ ಕುಟುಂಬಸ್ಥರು ಕೋವಿಡ್ ಕೇರ್ ಸೆಂಟರ್‌ನಲ್ಲಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದ ಘಟನೆ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಭಸ್ಮವಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ ಎನ್ನಲಾಗ್ತಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮನೆ: ಲಕ್ಷಾಂತರ ರೂ. ನಷ್ಟ - house catches fire
ಶಾರ್ಟ್ ಸರ್ಕ್ಯೂಟ್‌ನಿಂದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದ ಪ್ರಕಾಶ್ ಎಂಬುವವರ ಮನೆ ಸಂಪೂರ್ಣ ಭಸ್ಮವಾಗಿದೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದ ಪ್ರಕಾಶ್ ಎಂಬುವವರ ಮನೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ. ಕುಟುಂಬಸ್ಥರು ಕೊರೊನಾದಿಂದ ಕೋವಿಡ್ ಕೇರ್ ಸೆಂಟರ್‌ನಲ್ಲಿದ್ದ ವೇಳೆ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಪ್ರಾಣಾಪಾಯದಿಂದ ಕುಟುಂಬದ ಸದಸ್ಯರು ಪಾರಾಗಿದ್ದಾರೆ.
ಅಕ್ಕ-ಪಕ್ಕದ ಮನೆಗಳಿಗೂ ಬೆಂಕಿ ತಗುಲಿದೆ. ಅಗ್ನಿಶಾಮಕದಳ, ಗ್ರಾಮಸ್ಥರಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಶಾಸಕ ಪುಟ್ಟರಾಜು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸೆಸ್ಕ್ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.