ಮಂಡ್ಯ: ಹೇಮಾವತಿ ನದಿಗೆ ಗೊರೂರು ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲೂಕಿನ ನದಿ ಅಂಚಿನ ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಕೆ.ಆರ್. ಪೇಟೆ ತಾಲೂಕಿನ ಚಿಕ್ಕ ಮಂದಗೆರೆ ಗ್ರಾಮದ ಬಳಿ ಜಮೀನಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ನದಿ ನೀರಿನ ರಭಸಕ್ಕೆ ಬೆಳೆಗಳು ಕೊಚ್ಚಿಹೋಗಿವೆ. ಸಣ್ಣ ಸಣ್ಣ ಸೇತುವೆಗಳು ಮುಚ್ಚಿ ಹೋಗಿವೆ.
ಮುಳುಗಡೆ ಭೀತಿಯಲ್ಲಿ ಹಲವು ಗ್ರಾಮಗಳು ಚಿಕ್ಕಮಂದಗೆರೆ ಗ್ರಾಮಕ್ಕೆ ನೀರು ನುಗ್ಗಿದ್ದು ಕೆಲವು ಮನೆಗಳು ಜಲಾವೃತವಾಗಿವೆ. ಹಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದ್ದು, ಗ್ರಾಮಸ್ಥರೇ ಮುಂದೆ ನಿಂತು ಸಹಾಯಹಸ್ತ ಚಾಚುತ್ತಿದ್ದಾರೆ. ಪ್ರವಾಹ ನೋಡಲು ಜನತೆ ನದಿ ಪಾತ್ರ ಹಾಗೂ ಚಿಕ್ಕ ಮಂದಗೆರೆ, ಬೇವಿನಕೊಪ್ಪಲು ಗ್ರಾಮದ ಬಳಿ ಆಗಮಿಸುತ್ತಿದ್ದಾರೆ.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮವಹಿಸಿದ್ದು, ನದಿಪಾತ್ರಕ್ಕೆ ಜನರು ಹೋಗದಂತೆ ಎಚ್ಚರಿಕೆ ನೀಡಿದ್ದಾರೆ.