ಮಂಡ್ಯ:ಹಿಂದೂ ಹಾಗೂ ಹಿಂದೂ ಸಂಸ್ಕೃತಿಯಲ್ಲಿ ಬಿಜೆಪಿಗಿಂತ ದೇವೇಗೌಡ ಕುಟುಂಬ ಹತ್ತು ಹೆಜ್ಜೆ ಮುಂದೆ ಇದೆ. ಅವರಿಂದ ಹಿಂದೂ ಎಂಬ ಪ್ರಮಾಣ ಪತ್ರ ಬೇಕಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇಲ್ಲಿನ ಖಾಸಗಿ ಕಾರ್ಯಕ್ರಮದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹಿಂದೂ ಸಂಘಟನೆಗಳು, ಬಿಜೆಪಿಯ ಅಂಗ ಪಕ್ಷಗಳ ಕಾನೂನು ಬಾಹಿರ ಚಟುವಟಿಕೆಗಳ ಕೇಸ್ಗಳನ್ನು ತೆಗೆದು ಹಾಕಲು ಸರ್ಕಾರ ರಚಿಸಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.