ಮಂಡ್ಯ : ಬೇಬಿ ಬೆಟ್ಟ ಕಾವಲಿನಲ್ಲಿ ಅನಧಿಕೃತ ಗಣಿಗಾರಿಕೆ ಮಾಡುತ್ತಿರುವುದರಿಂದ ಅನುಮತಿಕೊಟ್ಟಂತಹ 22 ಸಿ ಫಾರಂ, 30 ಕ್ರಷರ್ ಹಾಗೂ 30 ಕ್ವಾರಿಗಳನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಪ್ರಕಟಣೆ ಹೊರಡಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಹಾಗೂ ಜಲ್ಲಿ ಕಲ್ಲುಪುಡಿ ಘಟಕಗಳ ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಪಾಂಡವಪುರ ತಾಲ್ಲೂಕು ಬೇಬಿ ಬೆಟ್ಟ ಗ್ರಾಮದ ವ್ಯಾಪ್ತಿಯ ಅನಧಿಕೃತ ಗಣಿಗಾರಿಕೆ ಹಾಗೂ ಸಾಗಾಣಿಕೆ ಸಂಬಂಧಿಸಿದಂತೆ ಗಣಿಗಾರಿಕೆ ನಿಯಂತ್ರಿಸಲು ಶಾಶ್ವತ ಚೆಕ್ ಪೋಸ್ಟ್‌ಳನ್ನು ನಿರ್ಮಾಣ ಮಾಡಲಾಗಿದೆ. ಅಕ್ರಮ ಗಣಿಗಾರಿಕೆ ಹಾಗೂ ಸಾಗಾಣಿಕೆ ನಿಯಂತ್ರಿಸಲು ಪರಿಶೀಲನೆಗೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದರು.