ಮಂಡ್ಯ: ಮದ್ದೂರಿನ ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.
ವಸತಿ ಶಾಲೆಯಲ್ಲಿ ಕಲುಷಿತ ನೀರು ಸೇವನೆ: 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ಮದ್ದೂರಿನ ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.
ವಿದ್ಯಾರ್ಥಿನಿಯರು ಅಸ್ವಸ್ಥ
ಅಸ್ವಸ್ಥ ವಿದ್ಯಾರ್ಥಿನಿಯರನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಕೆಲವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇಬ್ಬರು ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರಿದಿದೆ.
ಈ ಘಟನೆಯಿಂದ ವಿದ್ಯಾರ್ಥಿಗಳ ಪೋಷಕರು ಆತಂಕಗೊಂಡಿದ್ದಾರೆ. ಘಟನೆಯ ಮಾಹಿತಿ ಪಡೆದ ಜಿಲ್ಲಾಡಳಿತ, ಸೂಕ್ತ ತುರ್ತು ಚಿಕಿತ್ಸಾ ಕ್ರಮಕ್ಕೆ ಸೂಚನೆ ನೀಡಿದೆ.