ಕರ್ನಾಟಕ

karnataka

ETV Bharat / state

ಅಂತ್ಯ ಸಂಸ್ಕಾರ ಮುಗಿಸಿ ಬರುವಾಗ ಅಪಘಾತ: 15ಕ್ಕೂ ಹೆಚ್ಚು ಮಂದಿಗೆ ಗಾಯ - 15ಕ್ಕೂ ಹೆಚ್ಚು ಮಂದಿ ಗಾಯ

ಟಾಟಾ ಏಸ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಮೀಪದ ತೂಬಿನಕೆರೆ ಬಳಿ ನಡೆದಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ಮಂದಿ

By

Published : Jul 30, 2019, 10:49 PM IST

ಮಂಡ್ಯ:ಶವ ಸಂಸ್ಕಾರ ಮಾಡಿ ಸ್ವಗ್ರಾಮದತ್ತ ಹೊರಟಿದ್ದ ವೇಳೆ ಟಾಟಾ ಏಸ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಮೀಪದ ತೂಬಿನಕೆರೆ ಬಳಿ ನಡೆದಿದೆ.

ಮಧ್ಯಾಹ್ನ ಶವ ಸಂಸ್ಕಾರಕ್ಕೆ ಹೋಗಿದ್ದ ಕೊತ್ತತ್ತಿ, ಬೇವಿನಹಳ್ಳಿ, ತೂಬಿನಕೆರೆ ಗ್ರಾಮದ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶವ ಸಂಸ್ಕಾರಕ್ಕೆ ಬಂದ ಜನರು ಟಾಟಾ ಏಸ್ ವಾಹನದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬರುವಾಗ ಅವಘಡ ನಡೆದಿದೆ. ಚಾಲಕನ ಅತಿಯಾದ ವೇಗವೇ ಘಟನೆಗೆ ಕಾರಣ ಎನ್ನಲಾಗಿದೆ.

ಮಂಡ್ಯದಲ್ಲಿ ಟಾಟಾ ಏಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ

ಘಟನೆಯಲ್ಲಿ 5 ಮಂದಿಗೆ ಗಂಭೀರ ಗಾಯಗಳಾಗಿದ್ದು, ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details