ಕರ್ನಾಟಕ

karnataka

ETV Bharat / state

ಕೊರೊನಾ ನಿಯಂತ್ರಣದಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲ: ಸದನದಲ್ಲಿ ಚರ್ಚೆಯ ಎಚ್ಚರಿಕೆ ನೀಡಿದ ಶಾಸಕ

ಕೊರೊನಾ ಮತ್ತು ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಯಾವುದೇ ಸಹಕಾರ ನೀಡುತ್ತಿಲ್ಲ. ಈ ಕುರಿತು ಸಿಎಂ‌ಗೆ ಮನವಿ ಮಾಡುತ್ತೇನೆ. ತಡೆ ಹಿಡಿದಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ.

ಕೊರೊನಾ ವಿಚಾರದಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲ
ಕೊರೊನಾ ವಿಚಾರದಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲ

By

Published : Aug 26, 2020, 1:11 PM IST

ಮಂಡ್ಯ:ಸುಮಾರು 3 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಕ್ಷೇತದ ಪಾಲಹಳ್ಳಿ - ಕಾರೇಕುರ ರಸ್ತೆ ಅಭಿವೃದ್ಧಿ, ಲಕ್ಷ್ಮೀಪುರ - ನಗುನಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.

ರಸ್ತೆ ಕಾಮಗಾರಿಗೆ ಚಾಲನೆ

ಕಾಮಗಾರಿ ಗುದ್ದಲಿ ಪೂಜೆ ನಂತರ ಮಾತನಾಡಿ, ಕೋವಿಡ್ ವಿಚಾರದಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಜನಪ್ರತಿನಿಧಿಗಳ ಸಭೆ ಕರೆಯಿರಿ ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರೂ ಸಭೆ ಮಾಡಲು ಮುಂದಾಗಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇನೆ ಎಂದರು.

ಕೊರೊನಾ ವಿಚಾರವಾಗಲಿ, ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಯಾವುದೇ ಸಹಕಾರ ನೀಡುತ್ತಿಲ್ಲ. ಸಿಎಂ‌ಗೆ ಮನವಿ ಮಾಡುತ್ತೇನೆ, ತಡೆ ಹಿಡಿದಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿ ಎಂದರು.

ಕೋಟೆ ರಕ್ಷಣೆಗೆ ಸೂಚನೆ : ಶ್ರೀರಂಗಪಟ್ಟಣ ಕೋಟೆಯ ಕಂದಕ ಮುಚ್ಚಲಾಗುತ್ತಿದೆ. ಗೋಡೆಗಳ ರಕ್ಷಣೆ ಮಾಡಲಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುವೆ. ಪ್ರಾಚ್ಯವಸ್ತು ಇಲಾಖೆಯ ಅಧಿಕಾರಿಗಳ ಸಭೆ ಮಾಡಿ ಎಚ್ಚರಿಕೆ ನೀಡಲಾಗುವುದು ಎಂದರು.

ABOUT THE AUTHOR

...view details