ಮಂಡ್ಯ :ಬೇಬಿಬೆಟ್ಟದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಸಂಸದೆ ಸುಮಲತಾ ಅಂಬರೀಶ್ ಭೇಟಿ ನೀಡಿದ್ದ ಬೆನ್ನಲ್ಲೇ ಇದೀಗ ಕೆಆರ್ಎಸ್ಗೆ ಜಲಶಕ್ತಿ ಯೋಜನೆ ಅಧಿಕಾರಿಗಳು ಭೇಟಿ ನೀಡಿರೋದು ಕುತೂಹಲಕ್ಕೆ ಕಾರಣವಾಗಿದೆ.
ಜಲಶಕ್ತಿ ಸಚಿವಾಲಯದ ಅಪರ ಕಾರ್ಯದರ್ಶಿ ದೆಬಾಶ್ರೀ ಮುಖರ್ಜಿ ನೇತೃತ್ವದ ಅಧಿಕಾರಿಗಳ ತಂಡ ಆಗಮಿಸಿ ಅಣೆಕಟ್ಟೆ ಸುರಕ್ಷತೆ ಬಗ್ಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ.
ಕೆಆರ್ಎಸ್ ಜಲಾಶಯಕ್ಕೆ ಜಲಶಕ್ತಿ ಅಧಿಕಾರಿಗಳ ಭೇಟಿ ಅಲ್ಲದೇ ಅಣೆಕಟ್ಟೆ ಪುನಶ್ಚೇತನ ಕಾಮಗಾರಿ, ಅತ್ಯಾಧುನಿಕ ಗೇಟ್ ಬದಲಾವಣೆ ಕಾಮಗಾರಿ ವೀಕ್ಷಣೆ ಮಾಡಿದರು. ಬಳಿಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಭೆಗೆ ಜಲ ಸಂಪನ್ಮೂಲ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಮಾಧ್ಯಮಗಳಿಗೆ ನಿರ್ಬಂಧ
KRSಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಅಪರ ಕಾರ್ಯದರ್ಶಿ ನೇತೃತ್ವದ ಅಧಿಕಾರಿಗಳ ತಂಡ ಆಗಮನ ಹಿನ್ನೆಲೆ ಮಾಧ್ಯಮ ಪ್ರವೇಶಕ್ಕೂ ನಿಷೇಧ ಹೇರಲಾಗಿತ್ತು.