ಮಂಡ್ಯ: ಜೆಡಿಎಸ್ ಶಾಸಕರು ಬಿಜೆಪಿ ಸೇರ್ತಾರೆ. ಅಭಿವೃದ್ಧಿ ಕಾರ್ಯಗಳಿಂದ ಪ್ರೇರೇಪಣೆ ಆಗಿರುವ ಅವರು ಬಿಜೆಪಿ ಸೇರಲಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಮತ್ತೊಂದು ಬಾಂಬ್ ಸಿಡಿಸಿದರು.
ಮಂಡ್ಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರ ಕಾರ್ಯವೈಖರಿಯಿಂದ ಬಿಜೆಪಿ ಸೇರುತ್ತಾರೆ. ದೇಶದಲ್ಲಿ ಕಾಂಗ್ರೆಸ್ ಇಲ್ಲವಾಗುತ್ತಿದೆ. ಜ್ಯೋತಿರಾಧ್ಯ ಸಿಂದ್ಯಾ ಅವರಂತವರೇ ಕಾಂಗ್ರೆಸ್ ಬಿಡಲು ಸಿದ್ಧರಾಗಿದ್ದಾರೆ. ಹೀಗಾಗಿ ಜೆಡಿಎಸ್ ಶಾಸಕರೂ ನಮ್ಮತ್ತ ಬರುತ್ತಿದ್ದಾರೆ ಎಂದು ಹೇಳಿದರು.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇನ್ನು ರಾಜ್ಯಸರ್ಕಾರದಲ್ಲಿ ಯಾವುದೇ ಸಮನ್ವಯ ಸಮಿತಿ ರಚನೆ ಇಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ. ಯಾವ ಸಮಿತಿಯೂ ರಚನೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾನೂನಿನ ದಾರಿ ಮೂಲಕ ತನಿಖೆ:ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿ, ಕಾನೂನು ತನ್ನದೇ ದಾರಿಯಲ್ಲಿ ನಡೆಯುತ್ತದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಈ ಪ್ರಕರಣ ಎರಡು ವರ್ಷಗಳಿಂದ ನಡೆಯುತ್ತಿದೆ. ಕಾಂಗ್ರೆಸ್ ನಾಯಕರ ಆರೋಪದಲ್ಲಿ ಹುರುಳಿಲ್ಲ. ಡಿ.ಕೆ.ಶಿವಕುಮಾರ್ ಅವರೇ ತನಿಖೆಗೆ ಒಳಗಾಗಿದ್ದಾರೆ. ಇಂತಹ ಪ್ರಕರಣಗಳು ದೇಶದಾದ್ಯಂತ ನಡೆಯುತ್ತಿವೆ ಎಂದರು.