ಕರ್ನಾಟಕ

karnataka

ETV Bharat / state

ಜಿಪಂ ಸದಸ್ಯರ ವಿರುದ್ಧ ಹಕ್ಕು ಚ್ಯುತಿ ಮಂಡನೆ ಎಚ್ಚರಿಕೆ ನೀಡಿದ ಜೆಡಿಎಸ್ ಶಾಸಕ - JDS legislator warned zp member at Mandya

ಜಿಲ್ಲಾ ಪಂಚಾಯಿತಿ ಸದಸ್ಯರು ನನ್ನ ಹಕ್ಕು ಚ್ಯುತಿ ಮಾಡಿ ಗುದ್ದಲಿ ಪೂಜೆ ಮಾಡಿದ್ದಾರೆ. ಇವರ ಮೇಲೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಶಾಸಕ ಡಾ. ಅನ್ನದಾನಿ ಒತ್ತಾಯಿಸಿದ್ದಾರೆ.

zp member
ಜಿಪಂ ಸದಸ್ಯರ ವಿರುದ್ಧ ಹಕ್ಕು ಚ್ಯುತಿ ಮಂಡನೆ ಎಚ್ಚರಿಕೆ ನೀಡಿದ ಜೆಡಿಎಸ್ ಶಾಸಕ

By

Published : Jan 7, 2020, 1:39 PM IST

ಮಂಡ್ಯ:ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿರುವ ಗೋಕಾಕ್ ತಹಶೀಲ್ದಾರ್ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಶಾಸಕ ಡಾ. ಅನ್ನದಾನಿ ಒತ್ತಾಯ ಮಾಡಿದರು.

ಜಿ.ಪಂ ಸದಸ್ಯರ ವಿರುದ್ಧ ಹಕ್ಕು ಚ್ಯುತಿ ಮಂಡನೆ ಎಚ್ಚರಿಕೆ ನೀಡಿದ ಜೆಡಿಎಸ್ ಶಾಸಕ

ಮಾಧ್ಯಮಗಳ ಜೊತೆ ಮಾತನಾಡಿದ ಅವರು, 24 ಮಂದಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಮೇಲ್ಜಾತಿಯವರಿಗೆ ನೀಡಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಆ ಪ್ರಮಾಣಪತ್ರಗಳನ್ನು ರದ್ದು ಮಾಡಬೇಕು. ತಹಶೀಲ್ದಾರ್ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಿಂದ ಶಾಸಕರ ಹಕ್ಕು ಚ್ಯುತಿ: ಜಿಲ್ಲಾ ಪಂಚಾಯಿತಿ ಸದಸ್ಯರು ನನ್ನ ಹಕ್ಕು ಚ್ಯುತಿ ಮಾಡಿ ಗುದ್ದಲಿ ಪೂಜೆ ಮಾಡಿದ್ದಾರೆ. ಇವರ ಮೇಲೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಶಾಸಕರು ಒತ್ತಾಯ ಮಾಡಿದರು.

ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 5 ಕಾಮಗಾರಿಗಳ ಗುದ್ದಲಿ ಪೂಜೆಗೆ ನನ್ನನ್ನು ಆಹ್ವಾನ ಮಾಡಿಲ್ಲ. ಈ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಲಾಗುವುದು. ಹಕ್ಕು ಚ್ಯುತಿ ಮಂಡನೆ ಮಾಡುತ್ತೇನೆ ಎಂದು ಹೇಳಿದರು.

ಗಗನಚುಕ್ಕಿ ಜಲಪಾತೋತ್ಸವ: ಜನವರಿ 18 ಮತ್ತು 19 ರಂದು ಮಳವಳ್ಳಿ ತಾಲೂಕಿನ ಶಿವನಸಮುದ್ರದಲ್ಲಿ ಗಗನಚುಕ್ಕಿ ಜಲಪಾತೋತ್ಸವ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಅಶೋಕ್ ಮತ್ತು ಜಿಲ್ಲಾಧಿಕಾರಿಗಳು ಸಭೆ ಕರೆದಿದ್ದಾರೆ. ಸಭೆಯಲ್ಲಿ ಉತ್ಸವ ಸಂಬಂಧ ಚರ್ಚೆ ಮಾಡಲಾಗುವುದು. ಎರಡು ದಿನಗಳ ಉತ್ಸವಕ್ಕೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

For All Latest Updates

ABOUT THE AUTHOR

...view details