ಮಂಡ್ಯ:ಸಕ್ಕರೆ ಕಾರ್ಖಾನೆ ನಡೆಸಲು ಸಾಧ್ಯವಾಗದಷ್ಟು ರಾಜ್ಯ ಸರ್ಕಾರ ದಿವಾಳಿ ಆಗಿದೆಯೇ ಎಂದು ಜೆಡಿಎಸ್ ಶಾಸಕ ಸುರೇಶ್ ಗೌಡ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಮೈಶುಗರ್ ಕಾರ್ಖಾನೆ ನಡೆಸಲು ಸರ್ಕಾರಕ್ಕೆ ಅಸಾಧ್ಯವೇ? : ಶಾಸಕ ಸುರೇಶ್ ಗೌಡ ಪ್ರಶ್ನೆ - Mandya
ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ನಡೆಸಲು ಸಾಧ್ಯವಾಗದಷ್ಟು ರಾಜ್ಯ ಸರ್ಕಾರ ದಿವಾಳಿ ಆಗಿದೆಯೇ ಎಂದು ಜೆಡಿಎಸ್ ಶಾಸಕ ಸುರೇಶ್ ಗೌಡ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಜೆಡಿಎಸ್ ಶಾಸಕ ಸುರೇಶ್ ಗೌಡ
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಈ ಹಿಂದೆ ಮೈಶುಗರ್ ಕಾರ್ಖಾನೆಯನ್ನು ಸರ್ಕಾರವೇ ನಡೆಸಲಿದೆ ಎಂದಿದ್ದರು. ಅವರು ಮಾತಿನಂತೆ ನಡೆದುಕೊಳ್ಳಲಿ. ಇಲ್ಲವಾದರೆ ಹೋರಾಟ ಮಾಡಲಾಗುವುದು ಎಂದರು.
ಪಿಎಸ್ಎಸ್ಕೆ ಕಾರ್ಖಾನೆಯನ್ನು ಖಾಸಗಿಗೆ ನೀಡಿರುವುದರ ಹಿಂದೆ ಏನೋ ಹುನ್ನಾರ ನಡೆದಿದೆ. ಕಾರ್ಖಾನೆಯನ್ನು ನಿರಾಣಿ ಗ್ರೂಪ್ಗೆ ನೀಡಿರುವುದು ಬಿಜೆಪಿಯ ಬಂಡಾಯ ಶಮನ ಮಾಡಲು ಎಂಬ ಅನುಮಾನವಿದೆ. ಈ ಬಗ್ಗೆ ಸಿಎಂ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.