ಮಂಡ್ಯ: ಮೈ ಶುಗರ್ ಪ್ರಕರಣ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದೆ. ಹೋರಾಟಗಾರರು ನಿನ್ನೆಯಷ್ಟೇ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಜೆಡಿಎಸ್ ಶಾಸಕರು ಸಕ್ರಿಯರಾಗಿ ಇಂದು ಸಿಎಂ ಅವರ ಭೇಟಿ ಮಾಡಿದ್ದಾರೆ.
ಮೈ ಶುಗರ್ ವ್ಯಾಪ್ತಿಯ ಜೆಡಿಎಸ್ ಶಾಸಕರಾದ ಸಿ.ಎಸ್. ಪುಟ್ಟರಾಜು, ರವೀಂದ್ರ ಶ್ರೀ ಕಂಠಯ್ಯ, ಡಿ.ಸಿ. ತಮ್ಮಣ್ಣಾ, ಡಾ. ಕೆ ಅನ್ನದಾನಿ ಸೇರಿದಂತೆ ರೈತ ಮುಖಂಡರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಂಡು ಸರ್ಕಾರ ಮುನ್ನಡೆಸಿಕೊಂಡು ಹೋಗಬೇಕು ಎಂದು ಮನವಿ ಸಲ್ಲಿಸಿದ್ದಾರೆ.