ಮಂಡ್ಯ: ಸರ್ಕಾರಿ ವಾಹನದಲ್ಲಿ ಯುವಕನೋರ್ವ ಕೆಆರ್‌ಎಸ್ ಡ್ಯಾಂಗೆ ಅತಿಕ್ರಮಣ ಪ್ರವೇಶ ಮಾಡಿ ಜಾಲಿ ಡ್ರೈವ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪೊಲೀಸ್ ಜೀಪ್ನಲ್ಲಿ ಕೆಆರ್‌ಎಸ್ ಡ್ಯಾಂ ಮೇಲೆ ಯುವಕನ ಜಾಲಿ ರೈಡ್ : ವಿಡಿಯೋ ವೈರಲ್ - Jolly Ride on KRS Dam in Government Vehicle
ಕೆಆರ್‌ಎಸ್ ಡ್ಯಾಂ ಒಳಗೆ ಯುವಕನೋರ್ವ ಪೊಲೀಸ್ ಜೀಪ್ ಚಲಾಯಿಸಿಕೊಂಡು ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಡ್ಯಾಂ ಒಳಗೆ ಚೀಪ್ ಚಲಾಯಿಸಿಕೊಂಡು ಹೋದವರು
ಕೆಆರ್‌ಎಸ್ ಡ್ಯಾಂ ಒಳಗೆ ಜೀಪ್ ಚಲಾಯಿಸಿದ ಯುವಕ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಡ್ಯಾಂ ಮೇಲೆ ಪೊಲೀಸ್ ಜೀಪ್ ಚಲಾಯಿಸಿದ್ದಲ್ಲದೇ ಮೊಬೈಲ್ನಲ್ಲಿ ಚಿತ್ರೀಕರಣ ಸಹ ಮಾಡಲಾಗಿದೆ. ಕಾನೂನು ಪಾಲಿಸಬೇಕಿದ್ದ ಪೊಲೀಸ್ ಸಿಬ್ಬಂದಿಯೇ ಯುವಕನಿಗೆ ಸಾಥ್ ನೀಡಿದ್ದು, ಯುವಕ ಜೀಪ್ ಚಲಾಯಿಸುತ್ತಿದ್ರೆ, ಪಕ್ಕದಲ್ಲಿ ಕುಳಿತಿದ್ದ ಪೊಲೀಸ್ ಅಧಿಕಾರಿ ಮೊಬೈಲ್ನಲ್ಲಿ ವಿಡಿಯೋ ಮಾಡಿದ್ದಾರೆ ಎನ್ನಲಾಗ್ತಿದೆ.
ಭದ್ರತೆ ದೃಷ್ಟಿಯಿಂದ ಡ್ಯಾಂ ಮೇಲೆ ಯಾರೂ ಸಂಚರಿಸದಂತೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿದ್ದರೂ ಕೂಡ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಯೇ ನಿಯಮ ಉಲ್ಲಂಘನೆ ಮಾಡಿರುವುದರಿಂದ ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.