ಕರ್ನಾಟಕ

karnataka

ETV Bharat / state

ಹಿಂದಿ ಹೇರಿಕೆ ಬೇಡವೆಂದು ಮಂಡ್ಯದಲ್ಲಿ ಪ್ರತಿಭಟನೆ

ಕನ್ನಡ ವಿರೋಧಿ ನೀತಿ ಅನುಸರಿಸಿ, ಹಿಂದಿಯನ್ನು ಕನ್ನಡಿಗರ ಮೇಲೆ ಹೇರಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು.

By

Published : Nov 1, 2019, 6:07 PM IST

ಹಿಂದಿ ಹೇರಿಕೆ ವಿರೋಧಿಸಿ ಕನ್ನಡಿಗರಿಂದ ಪ್ರತಿಭಟನೆ

ಮಂಡ್ಯ: ಕನ್ನಡಿಗರ ಮೇಲೆ ಹಿಂದಿ ಭಾಷೆ ಹೇರಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಕನ್ನಡಪರ ಸಂಘಟನೆ ಮುಖಂಡರು ಇಂದು ಹಿಂದಿ ವಿರೋಧಿ ದಿನ ಆಚರಿಸಿದ್ದಾರೆ.

ಹಿಂದಿ ಹೇರಿಕೆ ವಿರೋಧಿಸಿ ಕನ್ನಡಿಗರಿಂದ ಪ್ರತಿಭಟನೆ

ನಗರದ ಗುರುಭವನದ ಬಳಿ ಪ್ರತಿಭಟನೆ ನಡೆಸಿದ ಹೋರಾಟಗಾರರು. ಹಿಂದಿಯನ್ನು ಕನ್ನಡಿಗರ ಮೇಲೆ ಹೇರಬೇಡಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದರು. ವಿದ್ಯಾರ್ಥಿಗಳು ಮತ್ತು ಸಾರ್ವಜನರಿಗೆ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಿದರು.

ಶ್ರೀ ರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯಿತಿಯಲ್ಲಿ ರಾಜ್ಯೋತ್ಸವ ಆಚರಣೆ ಮಾಡಿಲ್ಲ, ಕನ್ನಡ ಬಾವುಟವನ್ನು ಹಾರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಸ್ಥಳೀಯ ಯುವಕರು ಪಂಚಾಯಿತಿ ಮುಂದೆ ಧರಣಿ ನಡೆಸಿದ್ದಾರೆ. ಇತ್ತ ಡಿಡಿಪಿಐ ಕಚೇರಿ ಮೇಲೆ ಕನ್ನಡ ಬಾವುಟ ಹಾರಿಸಿಲ್ಲ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಕಚೇರಿಗೆ ಮುತ್ತಿಗೆ ಹಾಕಿದ್ದರು.

ಅದ್ಧೂರಿ ರಾಜ್ಯೋತ್ಸವದ ನಡುವೆಯೂ ಕೆಲವೆಡೆ ಕನ್ನಡ ರಾಜ್ಯೋತ್ಸವ ಆಚರಿಸದಿರುವುದು ಕನ್ನಡಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.

ABOUT THE AUTHOR

...view details